ದೇಶ

ಇನ್ಮುಂದೆ ದೆಹಲಿ ಪೊಲೀಸರಿಗೆ ಯೋಗಭ್ಯಾಸ ಕಡ್ಡಾಯ

ದೇಹದ ತೂಕ ಏರಿರುವುದರಿಂದ ಫಿಟ್​ನೆಸ್ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಪೊಲೀಸರ ಸಾಮಾನ್ಯ ದೂರು. ಇದಕ್ಕೆ ಪರಿಹಾರ ನೀಡಲು ಮುಂದಾಗಿರುವ ...

ಇನ್ಮುಂದೆ ದೆಹಲಿ ಪೊಲೀಸರಿಗೆ ಯೋಗಭ್ಯಾಸ ಕಡ್ಡಾಯ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಹದ ತೂಕ ಏರಿರುವುದರಿಂದ ಫಿಟ್​ನೆಸ್ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಪೊಲೀಸರ ಸಾಮಾನ್ಯ ದೂರು. ಇದಕ್ಕೆ ಪರಿಹಾರ ನೀಡಲು ಮುಂದಾಗಿರುವ ದೆಹಲಿ ಪೊಲೀಸ್ ಇಲಾಖೆ ಪೊಲೀಸರಿಗೆ ಯೋಗಾಭ್ಯಾಸ ಕಡ್ಡಾಯಗೊಳಿಸಿ  ಆದೇಶ ಹೊರಡಿಸಿದೆ.

ಅತಿಯಾದ ಕೆಲಸದ ಒತ್ತಡದಿಂದ ಕಾರ್ಯಕ್ಷಮತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲವಾದ ಕಾರಣ ಪೊಲೀಸರಿಗೆ ಯೋಗಾಭ್ಯಾಸದ ತರಬೇತಿ ನೀಡುವಂತೆ, ಪತ್ರ ಬರೆದ ನಂತರ ದೆಹಲಿ ಪೊಲೀಸ್ ಇಲಾಖೆ ಎಲ್ಲಾ ಠಾಣೆಗಳಲ್ಲೂ ಯೋಗಾಭ್ಯಾಸ ಕಡ್ಡಾಯಗೊಳಿಸಿದೆ.
ದೆಹಲಿ ಪೊಲಿಸ್ ಇಲಾಖೆ ಆದಷ್ಟು ಶೀಘ್ರವೇ  ಪೊಲೀಸರಿಗೆ ಯೋಗ ಶಿಕ್ಷಣ ಪ್ರಾರಂಭಿಸಲು ಸೂಚನೆ ನೀಡಿದೆ. ಪೊಲೀಸರಿಗೆ ಯೋಗ ಶಿಕ್ಷಣ ತರಬೇತಿ ನೀಡಲು ಬಾಬಾ ರಾಮ್ ದೇವ್  ಅವರನ್ನು ಸಂರ್ಪಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸರಿಗೆ ಯೋಗ ತರಬೇತಿ ನೀಡುವಂತೆ ಮತ್ತು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಯೋಗಭ್ಯಾಸ ಕಡ್ಡಾಯಗೊಳಿಸುವಂತೆ ಸಲಹೆ ನೀಡಿದ್ದಾರೆ. ಹಾಗಾಗಿ ಪೊಲೀಸ್ ಇಲಾಖೆ ಎಲ್ಲಾ ಪೊಲೀಸರಿಗೆ ಯೋಗಾಭ್ಯಾಸದ ತರಬೇತಿ ನೀಡಬೇಕು. ಕೇಂದ್ರ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಯೋಗ ತರಬೇತಿ ನೀಡಲು ವಾರ್ಷಿಕ 7 ಲಕ್ಷ ರೂ ಅನುದಾನ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.