ವಿಶೇಷ, ಸ್ಥಾನಮಾನಕ್ಕೆ ಆಗ್ರಹಿಸಿ ಆಂಧ್ರಪ್ರದೇಶ ಬಂದ್
ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವೈಎಸ್‌ಆರ್‌ಸಿ , ಎಡ ಪಕ್ಷಗಳ ಹಾಗೂ ಇತರೆ ಕಾರ್ಯಕರ್ತರು ಆಂಧ್ರದಾದ್ಯಂತ ಬಂದ್ ಗೆ ಕರೆ ನೀಡಿದ್ದಾರೆ...

ಆಂಧ್ರಪ್ರದೇಶ: ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವೈಎಸ್‌ಆರ್‌ಸಿ , ಎಡ ಪಕ್ಷಗಳ ಹಾಗೂ ಇತರೆ ಕಾರ್ಯಕರ್ತರು ಆಂಧ್ರದಾದ್ಯಂತ ಬಂದ್ ಗೆ ಕರೆ ನೀಡಿದ್ದಾರೆ.
ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂಪ್ರೇರಿತರಾಗಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ನೀಡಿದ್ದಾರೆ. ಆಂಧ್ರದ ವಿಜಯವಾಡ, ವಿಶಾಖಪಟ್ಟಣ, ತಿರುಮಲ ಸೇರಿದಂತೆ 13 ಜಿಲ್ಲೆಗಳಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಆಂಧ್ರ ಸ್ತಬ್ಧವಾಗಿದ್ದು, ಎಲ್ಲ ವ್ಯಾಪಾರ ವಹಿವಾಟು ಸ್ಥಗಿತವಾಗಿದೆ. ಬಂದ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಲವು ಕಾರ್ಮಿಕ ಸಂಘಟನೆಗಳು ಕೂಡ ಬೆಂಬಲ ನೀಡಿವೆ.
ಕೆಲ ಪ್ರದೇಶಗಳಲ್ಲಿ ರಾಜಕೀಯ ನಾಯಕರು ಹಾಗೂ ಕಾರ್ಯಕರ್ತರು ಆಂಧ್ರ ಪ್ರದೇಶ ಸಾರಿಗೆ ಬಸ್ ಗಳನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ವಿಶಾಖಪಟ್ಟಣ, ತಿರುಪತಿ ಮತ್ತು ಗುಂಟೂರುಗಳಲ್ಲಿ ಕೆಲವು ವಾಹನಗಳನ್ನು ಪ್ರತಿಭಟನಾಕರರು ತಡೆದರು.
ಇನ್ನೂ ಹಲವು ಪ್ರತಿಭಟನಾಕಾರರನ್ನು ಹಾಗೂ ಅವರ ಮುಖಂಡರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


