ದೇಶ

5 ವರ್ಷದ ಮಗನೊಂದಿಗೆ ಐಸಿಸ್ ಸೇರಲು ತೆರಳುತ್ತಿದ್ದ ಮಹಿಳೆಯ ಬಂಧನ?

ಭಯೋತ್ಪಾದಕ ಸಂಘಟನೆ ಐಸಿಸ್ ಸೇರಲು ತೆರಳುತ್ತಿದ್ದ 28 ವರ್ಷದ ಬಿಹಾರದ ಮಹಿಳೆಯನ್ನು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು..

5 ವರ್ಷದ ಮಗನೊಂದಿಗೆ ಐಸಿಸ್ ಸೇರಲು ತೆರಳುತ್ತಿದ್ದ ಮಹಿಳೆಯ ಬಂಧನ?
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಯೋತ್ಪಾದಕ ಸಂಘಟನೆ ಐಸಿಸ್ ಸೇರಲು ತೆರಳುತ್ತಿದ್ದ 28 ವರ್ಷದ ಬಿಹಾರದ ಮಹಿಳೆಯನ್ನು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಯಾಸ್ಮಿನ್ ಮೊಹಮ್ಮದ್ ಎಂಬ ಮಹಿಳೆ ತನ್ನ 5 ವರ್ಷದ ಮಗನೊಂದಿಗೆ ಆಫ್ಘಾನಿಸ್ತಾನದ ಕಾಬೂಲ್​ಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಆಕೆ ಕಾಬೂಲ್ ಮೂಲಕ ಕೇರಳದಿಂದ ನಾಪತ್ತೆಯಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳಿದ್ದಾರೆ ಎನ್ನಲಾಗುತ್ತಿರುವ ಯುವಕರನ್ನು ಭೇಟಿ ಮಾಡಲು ತೆರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳಯ ಯಾಸ್ಮಿನ್​ನನ್ನು ಬಂಧಿಸಿ ನಂತರ ಆಕೆಯನ್ನು ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಕೇರಳ ಪೊಲೀಸರ ತಂಡ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಕೇರಳ ಯುವಕರ ನಾಪತ್ತೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅಬ್ದುಲ್ ರಷೀದ್ ಎಂಬಾತನೊಂದಿಗೆ ಯಾಸ್ಮಿನ್ ಸಂಪರ್ಕ ಹೊಂದಿದ್ದಳು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.