ದೇಶ

ತೀವ್ರ ಜ್ವರದಿಂದಾಗಿ ವಾರಾಣಸಿ ರೋಡ್ ಶೋದಿಂದ ಅರ್ಧಕ್ಕೆ ಮರಳಿದ ಸೋನಿಯಾ

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರಧಾನಿ...

ತೀವ್ರ ಜ್ವರದಿಂದಾಗಿ ವಾರಾಣಸಿ ರೋಡ್ ಶೋದಿಂದ ಅರ್ಧಕ್ಕೆ ಮರಳಿದ ಸೋನಿಯಾ
ಸೋನಿಯಾ ಗಾಂಧಿ
Published On :
ನವದೆಹಲಿ: 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿಯಲ್ಲಿ ಚುನಾವಣಾ ರೋಡ್ ಶೋ ಗೆ ಚಾಲನೆ ನೀಡಿದರು. 
ಸೋನಿಯಾ ಗಾಂಧಿ ಅವರು ಸುಮಾರು 10 ಸಾವಿರ ಬೈಕುಗಳೊಂದಿಗೆ ತೆರೆದ ವಾಹನದಲ್ಲಿ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿದರು. ಆದರೆ ತೀವ್ರ ಜ್ವರದ ಹಿನ್ನೆಲೆಯಲ್ಲಿ ಅರ್ಧದಲ್ಲಿಯೇ ರೋಡ್ ಶೋದಿಂದ ನಿರ್ಗಮಿಸಿದರು.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕಾಂಗ್ರೆಸ್​ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಅನುಭವಿಸಿರುವ ಮುಖಭಂಗಕ್ಕೆ ತಿರುಗೇಟು ನೀಡಲು ಈಗಿನಿಂದಲೇ ತಯಾರಿ ಮಾಡಿಕೊಂಡಿರುವ ಕಾಂಗ್ರೆಸ್, ಪ್ರಧಾನಿ ಕ್ಷೇತ್ರದಿಂದಲೆ ಪ್ರಚಾರ ಪ್ರಾರಂಭಿಸಿ ಮೋದಿಗೆ ನೇರ ಪೈಪೋಟಿ ನೀಡುವ ಸಂದೇಶ ರವಾನಿಸಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದಿಕ್ಷೀತ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್, ರಾಜ್ಯದ ಚುನಾವಣಾ ಉಸ್ತುವಾರಿ ವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೋನಿಯಾಗೆ ಮೆರವಣಿಗೆಯಲ್ಲಿ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸೋನಿಯಾ, ಅಭಿವೃದ್ಧಿ ವಂಚಿತ ವಾರಣಾಸಿಯಿಂದ ಈ ಬಾರಿ ಚುನಾವಣೆ ಆರಂಭಿಸಿದ್ದು, ಅಭಿವೃದ್ಧಿಯ ಉತ್ತುಂಗದಲ್ಲಿರಬೇಕಾದ ಬನಾರಸ್ ಹಿಂದುಳಿದಿರುವುದು ದುರದೃಷ್ಟಕರ ಎಂದರು.
ಮುಂಬರುವ ಚುನಾವಣೆಯಲ್ಲಿ ಚಮತ್ಕಾರ ನಡೆಯಲಿದೆ, ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಆಡಳಿತಾರೂಢ ಸಮಾಜವಾದಿ ಪಕ್ಷದ ದುರ್ಬಲ ಆಡಳಿತ ಕೊನೆಗೊಳಿಸಲಿದೆ ಎಂದು ರಾಜ್ ಬಬ್ಬರ್ ಹೇಳಿದರು. ಮೆರವಣಿಗೆ ನಂತರ ಸಂಜೆ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿ ನವದೆಹಲಿಗೆ ವಾಪಸಾಗಲಿದ್ದಾರೆ ಸೋನಿಯಾ ಗಾಂಧಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.