ಕನ್ಹಯ್ಯ ಕುಮಾರ್ ಗೆ ಮಹಾ ವಿಧಾನಸಭೆ ಗ್ಯಾಲರಿಗೆ ಪ್ರವೇಶ ನಿರಾಕರಣೆಯನ್ನು ಪ್ರಶ್ನಿಸಿದ ಕಾಂಗ್ರೆಸ್
ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ಮಹಾರಾಷ್ಟ್ರ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ.

ಮುಂಬೈ: ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ಮಹಾರಾಷ್ಟ್ರ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ.
ಕನ್ಹಯ್ಯ ಕುಮಾರ್ ಭಯೋತ್ಪಾದಕನಲ್ಲ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ವಿಧಾನಸಭೆಯ ಕಲಾಪಗಳನ್ನು ವೀಕ್ಷಿಸಬಹುದು ಎಂದು ಕಾಂಗ್ರೆಸ್ ಶಾಸಕ ನದೀನ್ ಖಾನ್ ತಿಳಿಸಿದ್ದಾರೆ. ಕನ್ಹಯ್ಯ ಕುಮಾರ್ ಗೆ ಪ್ರೇಕ್ಷಕರ ಗ್ಯಾಲರಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿರುವ ನದೀನ್ ಖಾನ್, ಕನ್ಹಯ್ಯ ಕುಮಾರ್ ಬಳಿ ಪಾಸ್ ಇದ್ದರೂ ಸಹ ವಿಧಾನಸಭೆ ಪ್ರೇಕ್ಷಕರ ಗ್ಯಾಲರಿ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಕನ್ಹಯ್ಯ ಕುಮಾರ್ ಗೆ ವಿಧಾನಸಭೆಯೊಳಗೆ ಬಿಡದೆ ಇರಲು ಅವರೇನು ಭಯೋತ್ಪಾದಕರಾ ಎಂದು ನದೀನ್ ಪ್ರಶ್ನಿಸಿದ್ದಾರೆ.
ಕೃಷಿಕ, ಕಾರ್ಮಿಕ ಪಕ್ಷ (ಪಿಡಬ್ಲ್ಯೂಪಿ) ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕನ್ಹಯ್ಯ ಕುಮಾರ್, " ನಾನು ಮಹಾರಾಷ್ಟ್ರದ ವಿಧಾನಸಭೆಯಲ್ಲಿ ವಿದರ್ಭ ಮೇಲಿನ ಚರ್ಚೆಯನ್ನು ವೀಕ್ಷಿಸಲು ಕಾತರನಾಗಿದ್ದೆ. ಆದರೆ ನನಗೆ ಯಾವುದೇ ಸೂಕ್ತ ಕಾರಣ ನೀಡದೆ ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


