ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತ: ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಒತ್ತಾಯ
ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿತ್ರಿ ನದಿಗೆ ಕಟ್ಟಲಾಗಿದ್ದ ಬ್ರಿಟಿಷರ ಕಾಲದ ಮಹದ್ ಸೇತುವೆ ಇಂದು ನಸುಕಿನ...

Published On :
ಮುಂಬೈ: ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿತ್ರಿ ನದಿಗೆ ಕಟ್ಟಲಾಗಿದ್ದ ಬ್ರಿಟಿಷರ ಕಾಲದ ಮಹದ್ ಸೇತುವೆ ಇಂದು ನಸುಕಿನ ಜಾವ ಕುಸಿದು ಉಂಟಾದ ಅವಘಡಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮಹಾರಾಷ್ಟ್ರ ರಾಜ್ಯ ವಿರೋಧ ಪಕ್ಷ ಒತ್ತಾಯಿಸಿದೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಹಳೆ ಕಾಲದ ಸೇತುವೆಯನ್ನು ಸಂಚಾರಕ್ಕೆ ಇನ್ನೂ ಮುಕ್ತಗೊಳಿಸಲು ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೇಸು ದಾಖಲಿಸಬೇಕು ಎಂದು ಲೋಕೋಪಯೋಗಿ ಸಚಿವ ಚಂದ್ರಕಾಂತ್ ಪಾಟೀಲ್ ಒತ್ತಾಯಿಸಿದ್ದಾರೆ.
ಈ ಮಧ್ಯೆ ಇಂದು ಲೋಕಸಭೆಯಲ್ಲಿ ಘಟನೆ ಕುರಿತು ಮಾಹಿತಿ ನೀಡಿದ ಗೃಹ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಯ 4 ತಂಡದ 115 ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. 12 ದೋಣಿಗಳನ್ನು ಕಳುಹಿಸಲಾಗಿದೆ.
ಪ್ರವಾಹದಲ್ಲಿ ಕಣ್ಮರೆಯಾದ ಜನರು ಮತ್ತು ವಾಹನಗಳ ಹುಡುಕಾಟ ನಡೆಯುತ್ತಿದೆ. ಈ ಕಠಿಣ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಎಲ್ಲಾ ರೀತಿಯಲ್ಲಿ ನೆರವು ನೀಡಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
judicial probeನ್ಯಾಯಾಂಗ ತನಿಖೆಸೇತುವೆ ಕುಸಿತMaharashtra oppositionBridge collapseಮಹಾರಾಷ್ಟ್ರ ವಿಧಾನಸಭೆ ಪ್ರತಿಪಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


