ಕಾಶ್ಮೀರದಲ್ಲಿ ಪ್ರತಿಭಟನಾ ನಿರತ ನಾಗರಿಕರ ಸಾವು: ಪರಿಸ್ಥಿತಿ ಉದ್ವಿಗ್ನ
ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತರಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, ಕಣಿವೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರ: ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತರಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, ಕಣಿವೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಟನಾ ನಿರಂತರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಓರ್ವ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿವೆ. ಇದಕ್ಕೂ ಮುನ್ನ ಶ್ರೀನಗರದಲ್ಲಿ ಬ್ಯಾಂಕ್ ಎಟಿಎಂ ನ ಸೆಕ್ಯೂರಿಟಿ ಗಾರ್ಡ್ ನ್ನು ಮೊನಚಾದ ಶಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು, ಆದರೆ ಸ್ಥಳೀಯರು ಸೆಕ್ಯೂರಿಟಿ ಗಾರ್ಡ್ ನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ.
ಪ್ರತಿಭಟನೆ ತಡೆಗಟ್ಟಲು ಪೊಲೀಸರು ಗುಂಡು ಹಾರಿಸಿದ್ದು, ಈ ವೇಳೆ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕರ್ಫ್ಯೂ ವಿಧಿಸಲಾಗಿದೆ.
ಉಗ್ರ ಮುಜಾಫರ್ ಬುರ್ಹಾನ್ ವನಿ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಬಂದ್ ಆಗಸ್ಟ್ 5 ವರೆಗೆ ಮುಂದುವರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


