ಅಮೆರಿಕ ಮಹಿಳೆ ಮೇಲೆ ಅತ್ಯಾಚಾರ: ಬಾಲಿವುಡ್ ಸಹ ನಿರ್ದೇಶಕ ಫಾರೂಕಿಗೆ 7 ವರ್ಷ ಜೈಲು
ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಜನಪ್ರಿಯ ಬಾಲಿವುಡ್ ಸಿನಿಮಾ ಪಿಪ್ಲಿ ಲೈವ್ ಸಹ ನಿರ್ದೇಶಕ ಮೊಹಮ್ಮದ್ ಫಾರೂಕಿಗೆ...

Published On :
ನವದೆಹಲಿ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಜನಪ್ರಿಯ ಬಾಲಿವುಡ್ ಸಿನಿಮಾ 'ಪಿಪ್ಲಿ ಲೈವ್' ಸಹ ನಿರ್ದೇಶಕ ಮೊಹಮ್ಮದ್ ಫಾರೂಕಿಗೆ ದೆಹಲಿ ಕೋರ್ಟ್ ಮಂಗಳವಾರ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ಬಾಲಿವುಡ್ ನಿರ್ದೇಶಕ ಫಾರೂಕಿ ಅಮೆರಿಕ ಮೂಲದ ಸಂಶೋಧಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ದೆಹಲಿಯ ಸಾಕೇತ್ ಕೋರ್ಟ್ ನ ಸೆಷನ್ಸ್ ಜಡ್ಜ್ ಸಂಜೀವ್ ಜೈನ್ ಅವರು, ಐಪಿಸಿ ಸೆಕ್ಸೆನ್ 376(ಅತ್ಯಾಚಾರ)ರಡಿ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಇಂದಿಗೆ ಕಾಯ್ದಿರಿಸಿದ್ದರು.
ಇಂದು ಅಪರಾಧಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಲಯ, ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ 50 ಸಾವಿರ ರುಪಾಯಿ ದಂಡ ವಿಧಿಸಿದೆ.
ಕಳೆದ ವರ್ಷ ಮಾರ್ಚ್ 28ರಂದು ಮಾಹಿತಿ ಸಂಗ್ರಹಕ್ಕೆ ದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುಖದೇವ್ ವಿಹಾರದಲ್ಲಿ ಫಾರೂಕಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆಪಾದಿಸಿ ನ್ಯೂರ್ಯಾಕ್ ನ ಕೊಲಂಬಿಯಾ ವಿವಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ದೂರು ನೀಡಿದ್ದರು.
ತಮ್ಮಿಂದ ಆದ ಅಚಾತುರ್ಯಕ್ಕೆ ನ್ಯಾಯ ಪೀಠದ ಎದುರು ಫಾರೂಕಿ ಕ್ಷಮೆ ಯಾಚಿಸಿದ್ದರು. ಆದರೂ ನೊಂದ ಯುವತಿ ದೂರು ಹಿಂಪಡೆದಿರಲಿಲ್ಲ.
ಕೋರ್ಟ್ ತೀರ್ಪು ಹೊರಬಿಳುತ್ತಿದ್ದಂತೆಯೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಾರೂಕಿ ಅವರನ್ನು ಕೂಡಲೇ ವಶಕ್ಕೆ ಪಡೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


