ರಾಜನಾಥ್ ಸಿಂಗ್ ಭಾಷಣ ಬ್ಲಾಕ್ ಮಾಡಿಲ್ಲ, ಸಾರ್ಕ್ ಸಭೆ ಕ್ಯಾಮೆರಾದಲ್ಲಿ ಸೆರೆ
ಇಸ್ಲಾಮಾಬಾದ್ ನಲ್ಲಿ ನಡೆದ ಸಾರ್ಕ್ ಶೃಂಗಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಷಣವನ್ನು ಬ್ಲಾಕ್ ಮಾಡಲಾಗಿದೆ ಎಂಬ ವರದಿಯನ್ನು....

Published On :
ನವದೆಹಲಿ: ಇಸ್ಲಾಮಾಬಾದ್ ನಲ್ಲಿ ನಡೆದ ಸಾರ್ಕ್ ಶೃಂಗಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಷಣವನ್ನು ಬ್ಲಾಕ್ ಮಾಡಲಾಗಿದೆ ಎಂಬ ವರದಿಯನ್ನು ತಳ್ಳಿಹಾಕಿರುವ ಭಾರತ, ಉದ್ದೇಶಪೂರ್ವಕವಾಗಿ ಪಾಕಿಸ್ತಾನ ಗೃಹ ಸಚಿವರ ಭಾಷಣ ಪ್ರಸಾರ ಮಾಡಲು ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.
ಸಾರ್ಕ್ ಸಭೆಯ ಪ್ರಕ್ರಿಯೆಗಳನ್ನು ಚಿತ್ರೀಕರಿಸುವುದು ಸಾಮಾನ್ಯ ನಿಯಮ. ಹೀಗಾಗಿ ರಾಜನಾಥ್ ಸಿಂಗ್ ಭಾಷಣ ಬ್ಲಾಕ್ ಮಾಡಲಾಗಿದೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಸಾರ್ಕ್ ಸಭೆಯಲ್ಲಿ ನೀಡುವ ಹೇಳಿಕೆಗಳು ಸಾರ್ವಜನಕರಿಗೆ ಮತ್ತು ಮಾಧ್ಯಮಕ್ಕೆ ಮುಕ್ತವಾಗಿದ್ದು, ಸಭೆಯ ಇತರೆ ಪ್ರಕ್ರಿಯೆಗಳನ್ನು ಚಿತ್ರೀಕರಿಸಲಾಗುತ್ತದೆ. ಅಲ್ಲದೆ ಸಭೆಯಲ್ಲಿ ಯಾವುದೇ ವಿವಾದಗಳ ಕುರಿತು ಮುಕ್ತ ಚರ್ಚೆಗೆ ಅವಕಾಶವಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ,
ಇಂದು ಬೆಳಗ್ಗೆ ರಾಜನಾಥ್ ಸಿಂಗ್ ಅವರ ಭಾಷಣವನ್ನು ವರದಿ ಮಾಡಲು ಭಾರತದ ಮಾಧ್ಯಮಗಳು ಸೇರಿದಂತೆ ಯಾವುದೇ ಮಾಧ್ಯಮಗಳಿಗೂ ಅವಕಾಶ ನೀಡದೆ ಪಾಕಿಸ್ತಾನ ಉದ್ಧಟತನ ಮೆರೆದಿದೆ. ಸರ್ಕಾರಿ ಮಾಧ್ಯಮ ಪಿಟಿವಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ ಎಂದು ವರದಿ ಮಾಡಲಾಗಿತ್ತು.
ಪಾಕ್ ನಿಂದ ದೆಹಲಿಗೆ ವಾಪಸ್ಸಾದ ಗೃಹ ಸಚಿವರು
ಸಾರ್ಕ್ ಗೃಹ ಸಚಿವರ ಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ತೆರಳಿದ್ದ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಅವರು ಆಯೋಜಿಸಿದ್ದ ಭೋಜನಕುಟಕ್ಕೂ ತೆರಳದೆ ದೆಹಲಿಗೆ ವಾಪಸ್ ಆಗಿದ್ದಾರೆ. ಅಲ್ಲದೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಗದಿಯಾಗಿದ್ದ ಪತ್ರಿಕಾಗೋಷ್ಠಿಯನ್ನು ಸಹ ರದ್ದುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


