ದೇಶ

ಕೇಜ್ರಿ ಸರ್ಕಾರಕ್ಕೆ ಹಿನ್ನಡೆ: ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದ ಹೈಕೋರ್ಟ್

ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರೀಯ ರಾಜಧಾನಿ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ತೀರ್ಪಿನಿಂದಾಗಿ ಮುಖ್ಯಮಂತ್ರಿ ಅರವಿಂದ್...

ಕೇಜ್ರಿ ಸರ್ಕಾರಕ್ಕೆ ಹಿನ್ನಡೆ: ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದ ಹೈಕೋರ್ಟ್
ನಜೀಬ್ ಜಂಗ್-ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರೀಯ ರಾಜಧಾನಿ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ತೀರ್ಪಿನಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ(ಆಪ್) ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್(ಎಲ್​ಜಿ) ಅಧಿಕಾರಗಳನ್ನು ಪ್ರಶ್ನಿಸಿ ಆಪ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ ರೋಹಿಣಿ ಮತ್ತು ಜಯಂತ್ ನಾಥ್ ಅವರು ಅರ್ಜಿಯನ್ನು ವಜಾಗೊಳಿಸಿ, ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ಮಹತ್ವದ ತೀರ್ಪು ನೀಡಿದೆ.

ಸಚಿವ ಸಂಪುಟದ ಸಲಹೆ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಅವರು ಕಾರ್ಯ ನಿರ್ವಹಿಸಬೇಕು ಎಂಬ ಆಪ್ ಸರ್ಕಾರದ ಪ್ರತಿಪಾದನೆಯು ಆಧಾರರಹಿತವಾಗಿದ್ದು, ಅದನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ದೆಹಲಿಯಲ್ಲಿ ಪೊಲೀಸ್, ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ. ಲೆಫ್ಟಿನೆಂಟ್ ಗವರ್ನರ್ ಅವರ ಅಂಕಿತ ಇಲ್ಲದೆಯೇ ದೆಹಲಿಯ ಸಚಿವರು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಬಾರದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅವರು ತನ್ನ ವಿವೇಚನಾಧಿಕಾರದಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಕಳೆದ ವರ್ಷ ಮೇ 28 ರಂದು ಆಪ್ ಸರ್ಕಾರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರಿಂಗೆ: ಕೇಜ್ರಿ
ದೆಹಲಿಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.