ದೇಶ

ಭಾರತದ ಪ್ರದೇಶದಲ್ಲಿ ಚೀನಾ ರಸ್ತೆಗಳನ್ನು ನಿರ್ಮಿಸಿಲ್ಲ: ಮನೋಹರ್ ಪರಿಕ್ಕರ್

ಚೀನಾ ಭಾರತದ ಪ್ರದೇಶದಲ್ಲಿ ರಸ್ತೆಗಳನ್ನು ನಿರ್ಮಿಸಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಭಾರತದ ಪ್ರದೇಶದಲ್ಲಿ ಚೀನಾ ರಸ್ತೆಗಳನ್ನು ನಿರ್ಮಿಸಿಲ್ಲ: ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Published On :

ನವದೆಹಲಿ: ಭಾರತದ ಪ್ರದೇಶದಲ್ಲಿ ಚೀನಾ ರಸ್ತೆಗಳನ್ನು ನಿರ್ಮಿಸಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಲೋಕಸಭೆಯಲ್ಲಿ  ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನೋಹರ್ ಪರಿಕ್ಕರ್, "ನನಗೆ ಬಂದಿರುವ ಮಾಹಿತಿ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ಚೀನಾ ಭಾರತದ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಮಾಡಿಲ್ಲ" ಎಂದು ಹೇಳಿದ್ದಾರೆ. ಇನ್ನು ಭಾರತೀಯ ಸೇನೆಯ ಗಡಿ ರಸ್ತೆ ಸಂಸ್ಥೆ ಕೆಲಸಗಳಿಗೆ ಬಜೆಟ್ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಗಡಿ ರಸ್ತೆ ಸಂಸ್ಥೆಯ ಕೆಲಸಗಳಿಗೆ ಹಣದ ಕೊರತೆ ಇಲ್ಲ. ಹಿಂದೆಂದಿಗಿಂತಲೂ ಗಡಿ ರಸ್ತೆ ಸಂಸ್ಥೆಯ ಕೆಲಸಗಳು ವೇಗ ಗತಿಯಲ್ಲಿ ಸಾಗುತ್ತಿವೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ಸಿನೋ-ಭಾರತ ಗಡಿ ರೇಖೆಯಲ್ಲಿರುವ 73 ರಸ್ತೆಗಳನ್ನು ಆಯಕಟ್ಟಿನ ರಸ್ತೆಗಳೆಂದು ಗುರುತಿಸಲಾಗಿದ್ದು, ಈ ಪೈಕಿ ಒಟ್ಟು 707.24 ಕಿಮಿಗಳಷ್ಟಾಗುವ 22 ರಸ್ತೆಗಳ ನಿರ್ಮಾಣ ಸಂಪೂರ್ಣವಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.