ಊಟ ಮಾಡಲು ಪಾಕಿಸ್ತಾನಕ್ಕೆ ಹೋಗಿರಲಿಲ್ಲ: ರಾಜನಾಥ್ ಸಿಂಗ್ ತಿರುಗೇಟು
ನಾನು ಪಾಕಿಸ್ತಾನಕ್ಕೆ ಊಟ ಮಾಡಲು ಹೋಗಿರಲಿಲ್ಲ, ಭಯೋತ್ಪಾದಕರ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ ಎಂದು...

ನವದೆಹಲಿ: ನಾನು ಪಾಕಿಸ್ತಾನಕ್ಕೆ ಊಟ ಮಾಡಲು ಹೋಗಿರಲಿಲ್ಲ, ಭಯೋತ್ಪಾದಕರ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಸಂಸತ್ತಿನಲ್ಲಿ ವಿಪಕ್ಷಗಳ ಟೀಕೆಗೆ ಉತ್ತರಿಸಿದ ರಾಜ ನಾಥ್ ಸಿಂಗ್, ಭಯೋತ್ಪಾದಕ ಸಂಘಟನೆಗಳ ಭಾರತದ ನಿಲುವನ್ನು ಸ್ಪಷ್ಟ ಪಡಿಸಿದ್ದು, ಕೇವಲ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಂಡರೇ ಸಾಲದು, ಭಯೋತ್ಪಾದನೆಗೆ ಬೆಂಬಲ ನೀಡುವವರ ವಿರುದ್ಧವು ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾಗಿ ತಿಳಿಸಿದ್ದಾರೆ.
ಭಯೋತ್ಪಾದಕರನ್ನು ‘ಹುತಾತ್ಮ’ ಎಂದು ವೈಭವೀಕರಿಸುವುದು ಸಲ್ಲದು ಒಂದು ದೇಶದ ಉಗ್ರ ಹುತಾತ್ಮ ಇಲ್ಲವೇ ಸ್ವಾತಂತ್ರ್ಯ ಹೋರಾಟಗಾರ ಆಗಲು ಸಾಧ್ಯವಿಲ್ಲ. ಉಗ್ರರನ್ನು ಹುತಾತ್ಮರಾಗಿ ಬಿಂಬಿಸಲು ಸಾರ್ಕ್ ರಾಷ್ಟ್ರಗಳು ಮಾತ್ರವಲ್ಲ ಇಡೀ ಮಾನವ ಕುಲವೇ ಮುಂದಾಗಬಾರದು’ ಎಂದು ಮನವಿ ಮಾಡಿದರು.
ದಕ್ಷಿಣ ಏಷ್ಯಾ ದೇಶಗಳಲ್ಲಿ ಉತ್ತಮ ಪ್ರಾದೇಶಿಕ ಸಮೃದ್ಧಿ ಮತ್ತು ಸಹಕಾರದ ಅಗತ್ಯವಿದೆ. ಹೆಚ್ಚುತ್ತಿರುವ ಬೆದರಿಕೆ ಮತ್ತು ಉಗ್ರರ ಕೃತ್ಯಗಳು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಅಡ್ಡಿಯಾಗಿವೆ. ಪಠಾಣ್‌ಕೋಟ್, ಢಾಕಾ, ಕಾಬೂಲ್ ಮತ್ತಿತರ ಕಡೆಗಳಲ್ಲಿ ನಡೆದ ಭಯೋತ್ಪಾದಕರ ದಾಳಿಗಳು ದಕ್ಷಿಣ ಏಷ್ಯಾ ದೇಶದ ಶಾಂತಿ ಕದಡಿವೆ’ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


