ಆರ್ಎಸ್ಎಸ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಸ್ಸಾಂನ ಕಾಮ್ ರೂಪ್...

Published On :
ಗುವಾಹತಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಸ್ಸಾಂನ ಕಾಮ್ ರೂಪ್ ಮೆಟ್ರೊಪಾಲಿಟನ್ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಉಪಾಧ್ಯಕ್ಷರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್ 29ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ಅಸ್ಸಾಂ ಭೇಟಿ ನೀಡಿದ್ದ ವೇಳೆ ಬರ್ಪೆಟ ದೇವಾಲಯ ಪ್ರವೇಶಿಸಲು ನಾನು ಬಯಸಿದ್ದೆ. ಆದರೆ ಆರ್ಎಸ್ಎಸ್ ಕಾರ್ಯಕರ್ತರು ನನ್ನನ್ನು ತಡೆದಿದ್ದರು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಆರ್ಎಸ್ಎಸ್ ಕಾರ್ಯಕರ್ತ ಅಂಜನ್ ಬೋರಾ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


