ವಿಜಯ್ ಮಲ್ಯ ವಿರುದ್ಧ ಮತ್ತೊಂದು ಜಾಮೀನು ರಹಿತ ವಾರಂಟ್
ಚೆಕ್ ಬೌನ್ಸ್ ಪ್ರಕರಣ ಸಂಬಂಧ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್...

Published On :
ನವದೆಹಲಿ: ಚೆಕ್ ಬೌನ್ಸ್ ಪ್ರಕರಣ ಸಂಬಂಧ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಭಾರತ ತೊರೆದು ಲಂಡನ್ ನಲ್ಲಿ ನೆಲೆಸಿರುವ ವಿಜಯ್ ಮಲ್ಯ ರನ್ನು ನವೆಂಬರ್ 4ರಂದು ಕೋರ್ಟ್ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದು, ಲಂಡನ್ ಗೆ ಜಾಮೀನು ವಾರಂಟ್ ಕಳುಹಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.
ಮಲ್ಯ ತಮ್ಮ ವಿರುದ್ಧ ಪುನರಪಿ ಆಜ್ಞೆಗಳು ಬರುತ್ತಿದ್ದರು ನ್ಯಾಯಾಲಯದ ಮುಂದೆ ಹಾಜರಾಗಿಲ್ಲ. ಹೀಗಾಗಿ ನ್ಯಾಯಾಲಯದ ಮುಂದೆ ಮಲ್ಯ ಹಾಜರಾಗುವಂತೆ ಮಾಡಲು ಬಲವಂತದ ಕ್ರಮಗಳನ್ನು ಕೈಗೊಳ್ಳವ ಅಗತ್ಯವಿದೆ ಎಂದು ನ್ಯಾಯಾಲಯದ ಹೇಳಿದೆ.
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಲ್ಯ 7.5 ಕೋಟಿ ರುಪಾಯಿ ಚೆಕ್ ನೀಡಿದ್ದರು. ಅದು ಬೌನ್ಸ್ ಆದ ಹಿನ್ನೆಲೆ ಪಟಿಯಾಲ ಕೋರ್ಟ್ ನಲ್ಲಿ ದೂರು ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vijay MallyaKingfisher Airlinesವಿಜಯ್ ಮಲ್ಯಜಾಮೀನು ರಹಿತ ವಾರೆಂಟ್cheque bounceಚೆಕ್ ಬೌನ್ಸ್ ಪ್ರಕರಣಕಿಂಗ್ ಫಿಶರ್Non bailable warrant
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


