ಕಾಶ್ಮೀರ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?: ಓಮರ್ ಅಬ್ದುಲ್ಲಾ
ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಕಾಶ್ಮೀರದ ಪರಿಸ್ಥಿತಿಯನ್ನು ಆತಂಕಕಾರಿ ಎಂದು ಹೇಳಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಕಾಶ್ಮೀರದ ಪರಿಸ್ಥಿತಿಯನ್ನು ಹೃದಯ ವಿದ್ರಾವಕ, ಆತಂಕಕಾರಿ ಎಂದು ಹೇಳಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಕ್ರಮಕ್ಕೆ ಮೂರೂ ನಾಗರಿಕರು ಸಾವನ್ನಪ್ಪಿರುವ ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಓಮರ್ ಅಬ್ದುಲ್ಲಾ ಕಾಶ್ಮೀರದ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಇನ್ನು ಕಾಶ್ಮೀರ ಪರಿಸ್ಥಿತಿ ಸುಧಾರಣೆಯಾಗುತ್ತಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರದ ಹೇಳಿಕೆಗೂ ಓಮರ್ ಅಬ್ದುಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಮತ್ತೊಂದು ಸಾವು ಸಂಭವಿಸಿದ್ದರೂ ಕೇಂದ್ರ ಸರ್ಕಾರ ಮಾತ್ರ ಸುಪ್ರೀಂ ಕೋರ್ಟ್ ಗೆ ಕಾಶ್ಮೀರದ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳುತ್ತಿದೆ ಎಂದು ಓಮರ್ ಅಬ್ದುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜು.8 ರಂದು ಉಗ್ರ ವನಿ ಹತ್ಯೆಯ ನಂತರ ಕಣಿವೆಯಲ್ಲಿ ಉಂಟಾಗಿದ್ದ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಕೇಂದ್ರ ಸರ್ಕಾರ ಆಗಸ್ಟ್ 5 ರಂದು ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


