ಮುಂಬೈನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ, ಇಬ್ಬರ ಸಾವು
ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತಗೊಂಡು 24 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಸುಮಾರು 9 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮುಂಬೈ: ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತಗೊಂಡು 24 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ಭಿವಾಂಡಿಯಲ್ಲಿರುವ ಹನುಮಾನ್ ಟೆಕ್ರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 3 ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿದಿದೆ. ಈ ವೇಳೆ ಕಟ್ಟಡದಲ್ಲಿ 9 ಮಂದಿ ಇದ್ದರು. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.
ಪ್ರಸ್ತುತ ಘಟನಾ ಪ್ರದೇಶಕ್ಕೆ ಎನ್ ಡಿಆರ್ ಎಫ್ ತಂಡ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದವಾರವಷ್ಚೇ ಇದೇ ಪ್ರದೇಶದಲ್ಲಿ 2 ಮಹಡಿಗಳ ಕಟ್ಟಡವೊಂದು ಕುಸಿದು 8 ಮಂದಿ ಸಾವಿಗೀಡಾಗಿ 20 ಮಂದಿ ಗಾಯಗೊಂಡಿದ್ದರು. ಈ ಘಟನೆ ನಡೆದ ವಾರದೊಳಗೆ ಮತ್ತೊಂದು ಕಟ್ಟಡ ಕುಸಿದಿದೆ.
ತಜ್ಞರ ಪ್ರಕಾರ ಭಿವಾಂಡಿ ಪ್ರದೇಶದಲ್ಲಿ ಸಾಕಷ್ಟು ಹಳೆಯ ಕಟ್ಟಡಗಳಿದ್ದು, ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡಗಳ ಗೋಡೆಗಳು ಶಿಥಿಲಗೊಂಡಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಪ್ರಸ್ತುತ ಕುಸಿದಿರುವ ಕಟ್ಟಡವನವ್ನು ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ 3 ವರ್ಷಗಳ ಹಿಂದೆಯೇ ಅಪಾಯಕಾರಿ ಕಟ್ಟಡ ಎಂದು ಘೋಷಿಸಿತ್ತು, ಹೀಗಿದ್ದೂ ಈ ಕಟ್ಟಡದಲ್ಲಿ ಜನ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


