ಮಹಾ ಸೇತುವೆ ಕುಸಿತ: ಮತ್ತೆ ಎರಡು ಮೃತದೇಹ ಪತ್ತೆ, ಸಾವಿನ ಸಂಖ್ಯೆ 26ಕ್ಕೆ ಏರಿಕೆ
ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 26ಕ್ಕೆ ಏರಿಕೆಯಾಗಿದ್ದು,...

Published On :
ಮುಂಬೈ: ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 26ಕ್ಕೆ ಏರಿಕೆಯಾಗಿದ್ದು, ಭಾನುವಾರ ಮತ್ತೆ ಎರಡು ಮೃತದೇಹ ಪತ್ತೆಯಾಗಿವೆ. ಪತ್ತೆ ಮತ್ತು ರಕ್ಷಣಾ ನಾಲ್ಕನೇ ದಿನವೂ ಮುಂದುವರೆದಿದೆ.
ರಕ್ಷಣಾ ಸಿಬ್ಬಂದಿ ಇಂದು ಮತ್ತೆ ಎರಡು ಮೃತದೇಹಗಳನ್ನು ಪತ್ತೆ ಮಾಡಿದ್ದು, ಇದರೊಂದಿಗೆ ಒಟ್ಟು 26 ಮೃತದೇಹಗಳನ್ನು ಹೊರ ತೆಗೆದಂತಾಗಿದೆ. ಎಲ್ಲಾ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುಹಾಸ್ ದಿವಾಸೆ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕಳೆದ ಮಂಗಳವಾರ ತಡರಾತ್ರಿ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್ ಬಳಿ ಭಾರಿ ಮಳೆ ಮಳೆಯಿಂದಾಗಿ ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿದುಬಿದ್ದಿತ್ತು. ಈ ವೇಳೆ ಮಹರಾಷ್ಟ್ರ ಸಾರಿಗೆ ಸಂಸ್ಥೆಯ ಎರಡು ಬಸ್, ಒಂದು ತವೆರಾ, ಒಂದು ಹೋಂಡಾ ಸಿಟಿ ಕಾರು ಹಾಗೂ ಆಟೋವೊಂದು ಸಾವಿತ್ರಿ ನದಿಯಲ್ಲಿ ಕೊಚ್ಚಿ ಹೋಗಿದ್ದವು. ಈ ವಾಹನಗಳಲ್ಲಿ ಎಷ್ಟು ಜನರಿದ್ದರು ಎಂಬುದು ಇದುವರೆಗೂ ಖಚಿತ ಮಾಹಿತಿ ಇಲ್ಲ. ಆದರೆ ಕನಿಷ್ಠ 42 ಜನ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ರಾಯಗಡ ಜಿಲ್ಲಾಧಿಕಾರಿ ಸತಿಶ್ ವಾಗಲ್ ಅವರು ಹೇಳಿದ್ದಾರೆ.
ಕೊಚ್ಚಿ ಹೋದವರ ಪತ್ತೆಗಾಗಿ ಕಳೆದ ನಾಲ್ಕು ದಿನಗಳಿಂದ ಭಾರಿ ಕಾರ್ಯಾಚರಣೆ ನಡೆಯುತ್ತಿದೆ. ಸರ್ಕಾರಿ ಬಸ್ ಗಳ ಶೋಧಕ್ಕಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ಬರೊಬ್ಬರಿ 300 ಕೆಜಿ ತೂಕದ ಬೃಹತ್ ಅಯಸ್ಕಾಂತವನ್ನು ನೀರಿಗಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


