ಮಹಾರಾಷ್ಟ್ರದಲ್ಲಿ ಮತ್ತೋರ್ವ ಇಸೀಸ್ ಶಂಕಿತ ಉಗ್ರನ ಬಂಧನ
ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಓರ್ವ ಶಂಕಿತನನ್ನು ಬಂಧಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಓರ್ವ ಶಂಕಿತನನ್ನು ಬಂಧಿಸಿದ್ದಾರೆ.
ಪ್ರಭಾನಿ ಜಿಲ್ಲೆಯಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದ್ದು, ಇಕ್ಬಾಲ್ ಅಹ್ಮದ್ ಕಬೀರ್ ಎಂದು ಗುರುತಿಸಲಾಗಿದ್ದು, ಇಸೀಸ್ ಸಂಘಟನೆಯ ಇಬ್ಬರು ಶಂಕಿತರನ್ನು ಬಂಧಿಸಿದ ಎರಡೇ ದಿನಕ್ಕೆ ಮತ್ತೋರ್ವ ಶಂಕಿತನ ಬಂಧನವಾಗಿದೆ. ಎರಡು ದಿನಗಳ ಹಿಂದೆ ಬಂಧಿಸಲಾಗಿದ್ದ ನಾಸಿರ್ ಬಿನ್ ಯಾಫಿ ಚೌಸ್ ಹಾಗೂ ರಿಜ್ವಾನ್ ಖಾನ್ ನೀಡಿರುವ ಮಾಹಿತಿಯಡಿ ಇಕ್ಬಾಲ್ ಅಹ್ಮದ್ ಕಬೀರ್ ನ್ನು ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಭಾನಿ ಜಿಲ್ಲೆಯಿಂದಲೇ 31 ವರ್ಷದ ನಾಸಿರ್ ಬಿನ್ ಯಾಫಿ ಚೌಸ್ ಹಾಗೂ ರಿಜ್ವಾನ್ ಖಾನ್ ನ್ನು ಬಂಧಿಸಲಾಗಿತ್ತು. ಇಬ್ಬರೂ ಶಂಕಿತರು ಇಸ್ಲಾಮಿಕ್ ಉಗ್ರ ಸಂಘಟನೆಯನ್ನು ಸೇರಲು ಬಯಸುತ್ತಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಬಂಧಿಸಲಾಗಿದ್ದ ಶಂಕಿತ ಉಗ್ರರು ಇಸ್ಲಾಮಿಕ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕಾತಿ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


