ದೇಶ

ಲೋಕಸಭೆಯಲ್ಲಿ ಮಹತ್ವದ ಜಿಎಸ್ ಟಿ ತಿದ್ದುಪಡಿ ವಿಧೇಯಕ ಅಂಗೀಕಾರ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಮಹತ್ವದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ಲೋಕಸಭೆ...

ಲೋಕಸಭೆಯಲ್ಲಿ ಮಹತ್ವದ ಜಿಎಸ್ ಟಿ ತಿದ್ದುಪಡಿ ವಿಧೇಯಕ ಅಂಗೀಕಾರ
ಸಂಸತ್ ಭವನ
Published On :
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಮಹತ್ವದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ಲೋಕಸಭೆ ಅಂಗೀಕಾರ ನೀಡಿದೆ.
ಕಳೆದ ವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಜಿಎಸ್ ಟಿ ತಿದ್ದುಪಡಿ ವಿಧೇಯಕನ್ನು ಅರುಣ್‌ ಜೇಟ್ಲಿ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಬಳಿಕ ತೀವ್ರ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ಈ ವೇಳೆ ಸದನದಲ್ಲಿ ಹಾಜರಿದ್ದ ಎಲ್ಲಾ 427 ಸದಸ್ಯರೂ ವಿಧೇಯಕದ ಪರವಾಗಿ ಮತ ಚಲಾಯಿಸಿದರು. ಆದರೆ ಜಿಎಸ್ ಟಿ ವಿರೋಧಿಸಿ ಎಐಎಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದರು.
ಇದರೊಂದಿಗೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಎಸ್ ಟಿ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸದಂತಾಗಿದೆ.
ಇದಕ್ಕೂ ಮುನ್ನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಜಾರಿಯಿಂದಾಗಿ ಟ್ಯಾಕ್ಸ್ ಟೆರರಿಸಂಗೆ ತೆರೆ ಬೀಳಲಿದೆ ಮತ್ತು ಇನ್ನುಮುಂದೆ ಗ್ರಾಹಕನೇ ದೊರೆ ಎಂದು ಹೇಳಿದ್ದರು. ಅಲ್ಲದೆ ಜಿಎಸ್ ಟಿ ವಿಧೇಯಕ ಅಂಗೀಕಾರಕ್ಕೆ ಸಹಕರಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಧನ್ಯವಾದ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.