ಕಾಶ್ಮೀರ ವಿಷಯದಲ್ಲಿ ಮೋದಿ ತಮ್ಮ ಬಾಯಿ ಬದಲು ಬುದ್ದಿ ಉಪಯೋಗಿಸಲಿ: ಜೆಡಿಯು
: ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ಹಿಂಸಾಚಾರವನ್ನು ಸರಿದಾರಿಗೆ ತರಲು ಪ್ರಧಾನಿ ಮೋದಿ ಮಾತನಾಡುವ ಬದಲು ತಮ್ಮ ಬುದ್ದಿ ಉಪಯೋಗಿಸಬೇಕು ಎಂದು ...

ಪಾಟ್ನಾ: ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ಹಿಂಸಾಚಾರವನ್ನು ಸರಿದಾರಿಗೆ ತರಲು ಪ್ರಧಾನಿ ಮೋದಿ ಮಾತನಾಡುವ ಬದಲು ತಮ್ಮ ಬುದ್ದಿ ಉಪಯೋಗಿಸಬೇಕು ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಸಲಹೆ ನೀಡಿದ್ದಾರೆ.
ಕಾಶ್ಮೀರಿ ಪಂಡಿತರ ಸಮಸ್ಯೆ ಪರಿಹರಿಸಲು ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿರುವ ಅವರು, ಸ್ವಾತಂತ್ರ್ಯ ಹೋರಾಟಗಾರ ಚಂದ್ರ ಶೇಖರ್ ಆಜಾದ್ ಅವರ ಹುಟ್ಟೂರಿನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿದ್ದ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಕಾಶ್ಮೀರ ಪಂಡಿತರ ಸಮಸ್ಯೆ ಬಗ್ಗೆ ಮಾತನಾಡಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಇಡೀ ದೇಶದ ಜವಾಬ್ದಾರಿ ನಿಮ್ಮ ಮೇಲಿದೆ. ಅಧಿಕಾರಕ್ಕೂ ಬರುವ ಮುನ್ನ ಭರವಸೆ ನೀಡಿದ್ದೀರಿ. ನೀವು ಚಂದ್ರಶೇಖರ್ ಆಜಾದ್ ಅವರು ಹುಟ್ಟೂರಿಗೆ ಭೇಟಿ ನೀಡಿದಾಗ ಅಲ್ಲಿನ ಸಭೆಯಲ್ಲಿ ಕಾಶ್ಮೀರ ಪಂಡಿತರ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡುತ್ತೀರಿ ಎಂದು ನಾವೆಲ್ಲಾ ನಿರೀಕ್ಷಿಸಿದ್ದೆವು, ಆದರೆ ನೀವು ಒಂದು ಮಾತನಾಡದೇ ಇದ್ದುದ್ದು ನಮಗೆ ಬೇಸರ ತರಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


