ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ
ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಸರ್ಕಾರಗಳಿಗೂ ಈ ಕುರಿತು ಸೂಚನೆ

ನವದೆಹಲಿ: ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಸರ್ಕಾರಗಳಿಗೂ ಈ ಕುರಿತು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಳಿಸಿದೆ.
ಆಗಸ್ಟ್ 12 ರಿಂದ 18 ವರೆಗೆ ನಿರ್ಬಂಧ ಜಾರಿಯಲ್ಲಿರಲಿದ್ದು, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಈ ಆದೇಶ ಹೊರಡಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ವೇಳೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲೂ ಸ್ವಾತಂತ್ರ್ಯ ದಿನಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಕೆಂಪುಕೋಟೆ ಸುತ್ತಾ 3,140 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


