ದೇಶ

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ 3 ತಿಂಗಳು ರಜೆ

ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಮಹಿಳಾ ಉದ್ಯೋಗಿಗಳು ತನಿಖೆಯ ಅವಧಿಯಲ್ಲಿ ಮೂರು ತಿಂಗಳ ಕಾಲ ರಜೆ ಪಡೆದುಕೊಳ್ಳಬಹುದು...

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ 3 ತಿಂಗಳು ರಜೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಮಹಿಳಾ ಉದ್ಯೋಗಿಗಳು ತನಿಖೆಯ ಅವಧಿಯಲ್ಲಿ ಮೂರು ತಿಂಗಳ ಕಾಲ ರಜೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.
ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರೆತ ಹಾಗೂ ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು, ದಾಖಲಾಗುವ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕೇಂದ್ರೀಕೃತ ಡಾಟಾವನ್ನು ನಿರ್ವಹಣೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಿಳೆಯರಿಗೆ ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ಕಾಯ್ದೆ 2013ರ ಸೆಕ್ಷೆನ್ 12ರಡಿ ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಮಹಿಳೆಯರು ತನಿಖೆಯ ಅವಧಿಯಲ್ಲಿ ಮೂರು ತಿಂಗಳವರೆಗೆ ರಜಾ ಪಡೆದುಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದರು.
ಪ್ರಕರಣ ದಾಖಲಾದ ನಂತರ ಸ್ಥಳೀಯ ಸಮಿತಿ ಅಥವಾ ಆಂತರಿಕ ಸಮಿತಿ ನೀಡುವ ಶಿಫಾರಸಿನ ಆಧಾರದ ಮೇಲೆ ರಜೆಗಾಗಿ ಲಿಖಿತ ಮನವಿ ಸಲ್ಲಿಸಿದರೆ ಮೇಲಾಧಿಕಾರಿಗಳು ರಜೆಗೆ ಅನುಮತಿ ನೀಡುತ್ತಾರೆ ಎಂದು ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.