ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಲೋಕಸಭೆಯಲ್ಲಿ ನಡೆಯಲಿದೆ ಚರ್ಚೆ
ದೇಶಾದ್ಯಂತ ಚರ್ಚೆಯಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಸ್ಟ್ 11 ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ.

ನವದೆಹಲಿ: ದೇಶಾದ್ಯಂತ ಚರ್ಚೆಯಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಸ್ಟ್ 11 ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ.
ಲೋಕಸಭೆಯಲ್ಲಿ ಈಗಾಗಲೇ ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಲೋಕಸಭಾ ಸ್ಪೀಕರ್ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಚರ್ಚಿಸುವುದಕ್ಕೆ ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಗೋರಕ್ಷಣೆಯ ಕಾರಣದಿಂದ ದಲಿತರ ಮೇಲೆ ಹಲ್ಲೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಸ್ವಯಂ ಘೋಷಿಸಿದ ಗೋರಕ್ಷಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದರ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದ್ದು, ಆಗಸ್ಟ್.11 ರ ಕಲಾಪದಲ್ಲಿ ಚರ್ಚೆ ನಡೆಯಲಿದೆ. ದಲಿತರ ಮೇಲೆ ಹಲ್ಲೆಗೆ ಕಾರಣವಾಗುತ್ತಿರುವ ಸ್ವಯಂ ಘೋಷಿತ ಗೋ ರಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


