ಪ್ರಧಾನಿ ಮೋದಿ- ಚೀನಾ ವಿದೇಶಾಂಗ ಸಚಿವರ ಭೇಟಿ
ಭಾರತಕ್ಕೆ ಭೇಟಿ ನೀಡಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.
ವಾಂಗ್ ಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಚಿತ್ರವನ್ನು ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಟ್ವಿಟರ್ ನಲ್ಲಿ ಅಪ್ ಡೇಟ್ ಮಾಡಿದ್ದಾರೆ. ಚೀನಾ ವಿದೇಶಾಂಗ ಸಚಿವರು ಗೋವಾದಲ್ಲಿ ನಡೆಯಲಿರುವ 8 ನೇ ಬ್ರಿಕ್ಸ್ ಸಮ್ಮೇಳನದ ಬಗ್ಗೆ ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೆಕರ್ ಅವರೊಂದಿಗೆ ಚರ್ಚಿಸಲು ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೂ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಭಾರತ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನ ಭಾರತದ ಎನ್ಎಸ್ ಜಿ ಸದಸ್ಯತ್ವದ ಬಗ್ಗೆ ಮಾತನಾಡಿದ್ದ ಚೀನಾ ವಿದೇಶಾಂಗ ಸಚಿವರು, ಭಾರತ ಮತ್ತು ಚೀನಾ ಮಿತ್ರರೇ ಹೊರತು ಪ್ರತಿಸ್ಪರ್ಧಿಗಳಲ್ಲ. ಭಾರತಕ್ಕೆ ಎನ್ ಎಸ್ ಜಿ ಅವಕಾಶ ಇದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


