ದೇಶ

ಹುತಾತ್ಮ ಹವಲ್ದಾರ್ ಹಂಗ್ ಪನ್ ದಾದಾ ಗೆ ಅಶೋಕ ಚಕ್ರ ಗೌರವ

ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಕೆಚ್ಚೆದೆಯಿಂದ ಧೈರ್ಯದಿಂದ ಹೋರಾಡಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿ ...

ಹುತಾತ್ಮ  ಹವಲ್ದಾರ್ ಹಂಗ್ ಪನ್ ದಾದಾ ಗೆ ಅಶೋಕ ಚಕ್ರ ಗೌರವ
ಹವಾಲ್ದಾರ್ ಹಂಗ್​ಪನ್
Published On :

ನವದೆಹಲಿ: ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಕೆಚ್ಚೆದೆಯಿಂದ ಧೈರ್ಯದಿಂದ ಹೋರಾಡಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಹುತಾತ್ಮರಾಗಿದ್ದ ಹವಾಲ್ದಾರ್ ಹಂಗ್​ಪನ್ ದಾದಾಗೆ ಕೇಂದ್ರ ಸರ್ಕಾರ ಶಾಂತಿ ಕಾಲದ ಅತ್ಯುನ್ನತ ಸೇನಾ ಗೌರವವಾದ 'ಅಶೋಕ ಚಕ್ರ’ವನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ.

ಸ್ವಾತಂತ್ರ್ಯ ದಿನಾಚರಣೆ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಶೋಕ ಚಕ್ರ ಪ್ರಶಸ್ತಿ ಮತ್ತು ಇತರ ಸೇನಾ ಪ್ರಶಸ್ತಿಗಳನ್ನು ನೀಡಲಾಗುವುದು. ರಾಷ್ರಪತಿ ಪ್ರಣಬ್ ಮುಖರ್ಜಿ ಸೇನಾ ಪಡೆ ಮತ್ತು ಅರೆ ಸೇನಾ ಪಡೆಯ ಯೋಧರಿಗೆ 82 ಶೌರ್ಯ ಪ್ರಶಸ್ತಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.

ಅರುಣಾಚಲ ಪ್ರದೇಶ ಮೂಲದ ಹವಾಲ್ದಾರ್ ಹಂಗ್​ಪನ್ ಮೇ 27 ರಂದು ಉತ್ತರ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ದಾಡಾ ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.