ದೇಶ

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ಎಲ್ಲರಿಗೂ ಧನ್ಯವಾದ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನಾಳೆ 70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ...

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ಎಲ್ಲರಿಗೂ ಧನ್ಯವಾದ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ
Published On :

ನವದೆಹಲಿ: ನಾಳೆ 70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾಷಣ ಮಾಡಿದ ಪ್ರಣಬ್ ಮುಖರ್ಜಿ ಅವರು, ಸಂಸತ್ ನಲ್ಲಿ ಜಿಎಸ್ಟಿ ಮಸೂದೆಗೆ ಅನುಮೋದನೆ ಸಿಕ್ಕಿರುವುದು ಐತಿಹಾಸಿಕ ಸಾಧನೆಯಾಗಿದೆ. ಇನ್ನು ದೇಶದಲ್ಲಿ ಶಾಂತಿಯುತ ಅಧಿಕಾರ ಹಸ್ತಾಂತರ ಮೂಲಕ ನಾವು ಪ್ರಜಾಪ್ರಭುತ್ವನ್ನು ಉಳಿಸಿಕೊಳ್ಳಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೆಲವರಿಂದ ಬೆದರಿಗೆ ಇದ್ದು, ದೇಶದ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ವಿಪಕ್ಷ ಒಂದಾಗಬೇಕಿದೆ ಎಂದರು.

1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಭಾರತ ಪ್ರಜಾಪ್ರಭುತ್ವ ದೇಶವಾಗಿ ಉಳಿಯುತ್ತ ಎಂದು ಯಾರಿಗೂ ನಂಬಿಕೆ ಇರಲಿಲ್ಲ. ಆದರೆ ಜಗತ್ತೇ ಇಂದು ಪ್ರಜಾಪ್ರಭುತ್ವ ವ್ಯವಸ್ಥೆಯತ್ತ ತಿರುಗಿ ನೋಡುವಂತಾಗಿದೆ ಎಂದರು.

ನಮ್ಮ ಕನಸಿನ ಭಾರತವನ್ನು ನಾವೇ ನಿರ್ಮಾಣ ಮಾಡಬೇಕಿದೆ. ಆದರೆ ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಇಂತಹ ಘಟನೆಗಳು ನಾಗರಿಕ ಸಮಾಜವನ್ನು ಘಾಸಿಗೊಳಿಸುತ್ತದೆ. ಎಲ್ಲಾ ವರ್ಗದ ಜನರ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.