ದೇಶ

ದೆಹಲಿಯ ಗಂಗಾರಾಮ್ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್

: ಭುಜನೋವು ಹಾಗೂ ಜ್ವರದಿಂದ ಆಗಸ್ಟ್ 3 ರಂದು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ 11 ದಿನಗಳ ನಂತರ ..

ದೆಹಲಿಯ ಗಂಗಾರಾಮ್ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್
ಸೋನಿಯಾ ಗಾಂಧಿ
Published On :

ನವದೆಹಲಿ: ಭುಜನೋವು ಹಾಗೂ ಜ್ವರದಿಂದ ಆಗಸ್ಟ್  3 ರಂದು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ 11 ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋನಿಯಾ ಗಾಂಧಿ ಆರೋಗ್ಯ ಈಗ ಸ್ಥಿರವಾಗಿದ್ದು ಔಷಧಿಗಳನ್ನು ಮುಂದುವರಿಸುವಂತೆ  ತಿಳಿಸಿದ್ದು ವಿಶ್ರಾಂತಿ ಸೂಚಿಸಲಾಗಿದೆ ಎಂದು ಸರ್ ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಡಿ.ಎಸ್ ರಾಣಾ ತಿಳಿಸಿದ್ದಾರೆ.

ಭುಜನೋವಿನಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ವಾರಣಾಸಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ಸೋನಿಯಾಗಾಂಧಿ ಅಸ್ವಸ್ಥರಾಗಿ ಅರ್ಧದಲ್ಲೇ ರ್ಯಾಲಿ ಬಿಟ್ಟು ಆಸ್ಪತ್ರೆಗೆ ದಾಖಲಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.