ಸ್ವಾತಂತ್ರ್ಯ ಸಂಭ್ರಮಕ್ಕೆ ಅಡ್ಡಿ ಯತ್ನ: ಅಸ್ಸಾಂ ಮತ್ತು ಮಣಿಪುರದಲ್ಲಿ 7 ಸ್ಫೋಟ
70ನೇ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆಗೆ ಅಡ್ಡಿ ಪಡಿಸುವ ಉದ್ದೇಶದಿಂದ ಉಗ್ರರು ಅಸ್ಸಾಂ ಮತ್ತು ಮಣಿಪುರದಲ್ಲಿ 7 ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಗುವಾಹತಿ: 70ನೇ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆಗೆ ಅಡ್ಡಿ ಪಡಿಸುವ ಉದ್ದೇಶದಿಂದ ಉಗ್ರರು ಅಸ್ಸಾಂ ಮತ್ತು ಮಣಿಪುರದಲ್ಲಿ 7 ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಸ್ಸಾಂ ನ ಟಿನ್ಸುಕಿಯಾ, ಶಿವಸಾಗರ ಜಿಲ್ಲೆಯ ಐದು ಪ್ರದೇಶಗಳಲ್ಲಿ ಮತ್ತು ಮಣಿಪುರ ರಾಜಧಾನಿ ಇಂಫಾಲದ 2 ಕಡೆ ಸ್ಫೋಟ ನಡೆಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಉಲ್ಪಾ ಉಗ್ರರು ಈ ಸ್ಫೋಟ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಫೋಟದಲ್ಲಿ ಈ ವರೆಗೂ ಸಾವು-ನೋವುಗಳಾದ ಕುರಿತು ಮಾಹಿತಿ ಲಭ್ಯವಾಗಿಲ್ಲ. ಕಳೆದ ವಾರವಷ್ಟೇ 12 ಉಗ್ರ ಸಂಘಟನೆಗಳು ಭಾರತದ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆಯನ್ನು ನಿಷೇಧಿಸುವಂತೆ ಕರೆ ನೀಡಿದ್ದರು.
ಇದಾದ ಬೆನ್ನಲ್ಲೇ ಅಂದರೆ ಕಳೆದ ಶುಕ್ರವಾರ ಉಲ್ಫಾ ಉಗ್ರರು ನಡೆಸಿದ ಸ್ಫೋಟದಿಂದಾಗಿ ಹಿಂದಿ ಮಾತನಾಡುವ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಹಸಿರಾಗಿರುವ ಬೆನ್ನಲ್ಲೇ ಮತ್ತೆ ಅಸ್ಸಾಂ ಮತ್ತು ಮಣಿಪುರದಲ್ಲಿ 7 ಸ್ಫೋಟಗಳು ಸಂಭವಿಸಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


