ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನ ನೀಡಿ: ಅರವಿಂದ್ ಕೇಜ್ರಿವಾಲ್
ಬೇರೆ ರಾಜ್ಯಗಳಿಗೆ ಹೋಲಿಸಿದರೆ ದೆಹಲಿಯ ಮತದಾನದ ಬೆಲೆ ಏಕೆ ಕಡಿಮೆ ಎಂದು ಪ್ರಶ್ನಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ದೆಹಲಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ದೆಹಲಿಯ ಮತದಾನದ ಬೆಲೆ ಏಕೆ ಕಡಿಮೆ ಎಂದು ಪ್ರಶ್ನಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.
ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಮಹಾರಾಷ್ಟ್ರ, ಚತ್ತೀಸ್ ಗಢ, ಹರ್ಯಾಣ, ಮಧ್ಯಪ್ರದೇಶದ ಮತದಾರರ ಮತಕ್ಕಿಂತ ದೆಹಲಿ ಮತದಾರರ ಮತದ ಬೆಲೆ ಏಕೆ ಕಡಿಮೆ ಎಂದು ಪ್ರಶ್ನಿಸಿರುವ ದೆಹಲಿ ಸಿಎಂ, ದೆಹಲಿ ಸರ್ಕಾರಕ್ಕೆ ಬೇರೆ ರಾಜ್ಯ ಸರ್ಕಾರಗಳಿಗೆ ಇರುವಂತೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ದೆಹಲಿ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಲಾಯಿತು, ದೆಹಲಿ ಜನತೆಗೆ ತಮ್ಮದೇ ಆದ ಸರ್ಕಾರವನ್ನು ಆಯ್ಕೆ ಮಾಡಲು ಅಧಿಕಾರವಿದೆಯಾದರೂ, ಅಧಿಕಾರ ಮಾತ್ರ ಸೀಮಿತ ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದುವರೆ ವರ್ಷದಿಂದ ದೆಹಲಿ ಸರ್ಕಾರದ ಪ್ರತಿಯೊಂದು ಅಧಿಕಾರವನ್ನೂ ಕಸಿದುಕೊಳ್ಳಲಾಗುತ್ತಿದೆ, ಈಗ ದೆಹಲಿ ಸರ್ಕಾರದ ಬಳಿ ಯಾವುದೇ ರೀತಿಯ ಅಧಿಕಾರವಿಲ್ಲ ಈ ಹಿನ್ನೆಲೆಯಲ್ಲಿ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನ ನೀಡಬೇಕು ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


