ಶ್ರೀನಗರದ ನೌಹಾಟ್ಟಾದಲ್ಲಿ ಉಗ್ರರ ದಾಳಿ: 5 ಸಿಆರ್‌ಪಿಎಫ್ ಯೋಧರಿಗೆ ಗಾಯ
ಶ್ರೀನಗರದ ನೌಹಟ್ಟಾ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 7 ಸಿಆರ್‌ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ...

ಶ್ರೀನಗರ: ಶ್ರೀನಗರದ ನೌಹಟ್ಟಾ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 5 ಸಿಆರ್‌ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ದೇಶದಾದ್ಯಂತ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು. ತೀವ್ರವಾಗಿ ಕಟ್ಟೆಚ್ಚರ ವಹಿಸಲಾಗಿತ್ತು. ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಹೀಗಿದ್ದರೂ ಉಗ್ರರು ನೌಹಟ್ಟಾದಲ್ಲಿ ದಾಳಿ ನಡೆಸಿದ್ದಾರೆ. ಸಿಆರ್‌ಪಿಎಫ್ ಯೋಧರನ್ನೇ ಗುರಿಯಾಗಿಸಿಕೊಂಡಿರುವ ಉಗ್ರರು ಗುಂಡಿನ ದಾಳಿ ನಡೆದಿ 5 ಯೋಧರನ್ನು ಗಾಯಗೊಳಿಸಿದ್ದಾರೆ.
ಉಗ್ರರನ್ನು ಸದೆಬಡಿಸಲು ಯೋಧರು ಇದೀಗ ಕಾರ್ಯಾಚರಣೆಗಳಿದಿದ್ದು, ಸ್ಥಳದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಾಂತತ್ರ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಉಗ್ರರ ದಾಳಿ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಇದೀಗ ಉಗ್ರರು ದಾಳಿ ನಡೆಸಿರುವ ನೌಹಟ್ಟಾ ಪ್ರದೇಶವು ಶ್ರೀನಗರದ ಬಕ್ಷಿ ಸ್ಟೇಡಿಯಂನಿಂದ ಕೇವಲ ಸ್ವಲ್ಪ ದೂರದಲ್ಲಿಯೇ ಇದೆ. ಬಕ್ಷಿ ಸ್ಟೇಡಿಯಂ ನಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಒಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನದ ಭಾಷಣ ಮಾಡುತ್ತಿದ್ದರೆ ಅತ್ತ ನೌಹಟ್ಟಾದಲ್ಲಿ ಉಗ್ರರು ಗುಂಡಿನ ನಡೆಸುತ್ತಿದ್ದಾರೆ. ಭಾಷಣದ ವೇಳೆ ಮೋದಿಯವರು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಉಗ್ರವಾದ, ನಕ್ಸಲ್ ವಾದ, ಭಾರತ ಎಂದಿಗೂ ಸಹಿಸುವುದಿಲ್ಲ. ಉಗ್ರವಾದವನ್ನು ಬೆಂಬಲಿಸುವುದು ಅತೀ ದೊಡ್ಡ ಅಪರಾಧವಾಗಿದೆ. ಪಾಕಿಸ್ತಾನದ ಪೇಶಾವರದಲ್ಲಿ ಸಾಕಷ್ಟು ಮುಗ್ಧ ಮಕ್ಕಳು, ಅಮಾಯಕ ಜೀವಗಳನ್ನು ನಿಷ್ಕರುಣಿಗಳು ಬಲಿ ಪಡೆದುಕೊಂಡರು. ಪೇಶಾವರ ದಾಳಿ ಘಟನೆಗೆ ಭಾರತೀಯರು ಮರುಗಿದ್ದರು. ಒಂದೆಡೆ ಉಗ್ರರು ದುಷ್ಕೃತ್ಯ ನಡೆಸುತ್ತಿದ್ದರೆ ಮತ್ತೊಂದೆಡೆ ಸಂಭ್ರಮಾಚರಣೆಯನ್ನು ಮಾಡುತ್ತಿದ್ದರು. ಇಂತಹ ವಿಕೃತ ಕೆಲಸವನ್ನು ಭಾರತ ಬೆಂಬಲಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


