ದೇಶ

ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಕಾಂಗ್ರೆಸ್ ಧ್ವಜ ಹಿಡಿದ ಬಿಜೆಪಿ ಹಿರಿಯ ನಾಯಕ!

70ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಹಿರಿಯ ಬಾಬುಲಾಲ್...

ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಕಾಂಗ್ರೆಸ್ ಧ್ವಜ ಹಿಡಿದ ಬಿಜೆಪಿ ಹಿರಿಯ ನಾಯಕ!
ಬಾಬುಲಾಲ್ ಗೌರ್ (ಬಲಗಡೆ)
Published On :
ಭೋಪಾಲ್: 70ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಹಿರಿಯ ಬಾಬುಲಾಲ್ ಗೌರ್ ಅವರು ಕಾಂಗ್ರೆಸ್ ಧ್ವಜ ಹಿಡಿದಿ ಅಚ್ಚರಿ ಮೂಡಿಸಿದ್ದಾರೆ.
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿಯಾಗಿರುವ ಗೌರ್ ಅವರನ್ನು ಇತ್ತೀಚಿಗಷ್ಟೇ ವಯಸ್ಸಿನ ಕಾರಣದಿಂದ ಮಧ್ಯಪ್ರದೇಶ ಗೃಹ ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಆರಿಫ್ ಅಖೀಲ್ ನಿನ್ನೆ ಆಯೋಜಿಸಿದ್ದ ಪೈಗಮ್ ಇ ಮೊಹಬತ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ 'ಕೈ'ಹಿಡಿಯುವ ಸೂಚನೆ ನೀಡಿದ್ದಾರೆ.
ಅಖೀಲ್ ಅವರು ಪ್ರತಿವರ್ಷ ಸ್ವಾತಂತ್ರ್ಯೋತ್ಸವ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದಕ್ಕೆ ಸ್ವಾತಂತ್ರ್ಯ ಹೋರಾಟಗಾರರನ್ನು, ವಿವಿಧ ಧಾರ್ಮಿಕ ಮುಖಂಡರನ್ನು ಹಾಗೂ ರಾಜಕೀಯ ನಾಯಕರನ್ನು ಆಹ್ವಾನಿಸುತ್ತಾರೆ. ಹಾಗೆಯೇ ಗೌರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಆಹ್ವಾನಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಕಾಂಗ್ರೆಸ್ ಧ್ವಜ ಹಿಡಿದಿರುವ ಫೋಟೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.