ದೇಶ

ಭಾರತ ಭಯೋತ್ಪಾದನೆ ಬಗ್ಗೆ ಮಾತಾಡಲು ಸಿದ್ಧ, ಕಾಶ್ಮೀರ ವಿಷಯ ಚರ್ಚೆಗೆ ಸಿದ್ಧವಿಲ್ಲ: ವಿದೇಶಾಂಗ ಕಾರ್ಯದರ್ಶಿ

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಸಭೆಗೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಭಾರತ ಸರ್ಕಾರ....

ಭಾರತ ಭಯೋತ್ಪಾದನೆ ಬಗ್ಗೆ ಮಾತಾಡಲು ಸಿದ್ಧ, ಕಾಶ್ಮೀರ ವಿಷಯ ಚರ್ಚೆಗೆ ಸಿದ್ಧವಿಲ್ಲ: ವಿದೇಶಾಂಗ ಕಾರ್ಯದರ್ಶಿ
ವಾಘಾ ಗಡಿಯಲ್ಲಿ ಭಾರತ ಪಾಕಿಸ್ತಾನ ಸೈನಿಕರು
Published On :

ನವದೆಹಲಿ: ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಸಭೆಗೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಭಾರತ ಸರ್ಕಾರ, ಬೇಕಾದರೆ ಭಯೋತ್ಪಾದನೆ ವಿಷಯದ ಬಗ್ಗೆ ಚರ್ಚೆ ಮಾಡೋಣ ಎಂದಿದೆ.

ಭಯೋತ್ಪಾದನೆ ಅತಿ ಪ್ರಮುಖ ವಿಷಯವಾಗಿದ್ದು, ಈ ಬಗ್ಗೆ ಚರ್ಚಿಸುವ ಅಗತ್ಯವಿದ್ದು ಭಾರತ ಪಾಕಿಸ್ತಾನದೊಂದಿಗೆ ಚರ್ಚಿಸಲು ಸಿದ್ಧವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯದ ಪರವಾಗಿ ಮಾತನಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಭಾರತವನ್ನು ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಆಹ್ವಾನಿಸಲಾಗಿತ್ತು. ಆದರೆ ಭಾರತ ಮಾತ್ರ ಪಾಕಿಸ್ತಾನದ ಆಹ್ವಾನವನ್ನು ತಿರಸ್ಕರಿಸಿದ್ದು ಭಯೋತ್ಪಾದನೆ ಬಗ್ಗೆ ಮಾತನಾಡಲು ಸಿದ್ಧವಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ್ದೇ ಆಗಿದ್ದು, ಪಾಕಿಸ್ತಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಾಗೂ ಬಲೂಚಿಸ್ಥಾನಗಳಲ್ಲಿ ನಡೆಸುತ್ತಿರುವ ಮಾನವ ಹಕ್ಕು ಉಲ್ಲಂಘನೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.