ದೇಶ

ಕೇಂದ್ರ ಸಚಿವ ವಿ.ಕೆ ಸಿಂಗ್ ಪತ್ನಿಗೆ ವ್ಯಕ್ತಿಯಿಂದ ಬ್ಲ್ಯಾಕ್ ಮೇಲ್

ತಮಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ವಿ.ಕೆ. ಸಿಂಗ್ ಪತ್ನಿ ..

ಕೇಂದ್ರ ಸಚಿವ ವಿ.ಕೆ ಸಿಂಗ್ ಪತ್ನಿಗೆ ವ್ಯಕ್ತಿಯಿಂದ ಬ್ಲ್ಯಾಕ್ ಮೇಲ್
ವಿ.ಕೆ ಸಿಂಗ್ ಮತ್ತು ಪತ್ನಿ ಭಾರತಿ ಸಿಂಗ್
Published On :

ನವದೆಹಲಿ: ತಮಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ವಿ.ಕೆ. ಸಿಂಗ್ ಪತ್ನಿ ಭಾರತಿ ಸಿಂಗ್ ದೂರು ದಾಖಲಿಸಿದ್ದಾರೆ.

ಪರಿಚಯಸ್ಥನೊಬ್ಬನ ಹೆಸರು ಹೇಳಿಕೊಂಡ ಬ್ಲಾಕ್ ಮೇಲ್ ಮಾಡಿ 2 ಕೋಟಿ ಹಣ ನೀಡುವಂತೆ ಬೆದರಿಕೆಯೊಡ್ಡಿದ್ದಾನೆಂದು ಭಾರತಿ ಸಿಂಗ್ ದೂರಿದ್ದಾರೆ.

ಪ್ರದೀಪ್ ಚೌಹಾಣ್ ಎಂಬಾತ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ನನಗೆ ಹಾಗೂ ಕುಟುಂಬದವರಿಗೆ ಪ್ರಾಣ ಬೆದರಿಕೆಯೊಡ್ಡಿದ್ದಾನೆಂದು ಭಾರತಿ ದೂರು ದಾಖಲಿಸಿದ್ದಾರೆ.

ದೆಹಲಿಯ ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 6ರಂದು ತನ್ನ ಜೊತೆ ನಡೆಸಿದ ಸಂಭಾಷಣೆಯನ್ನು ರೆಕಾರ್ಡ್ ಮಾಡಿರುವ ಪ್ರದೀಪ್, ಸಾಮಾಜಿಕ ಜಾಲತಾಣದಲ್ಲಿ ಇದನ್ನು ಪೋಸ್ಟ್ ಮಾಡುವುದಾಗಿ ಬೆದರಿಸಿದ್ದಾನೆ. ಅಲ್ಲದೆ 2 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಆಡಿಯೋದಲ್ಲಿ ಏನಿದೆ ಎಂಬುದು ತಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.