ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆಯಿಂದ ದೂರವಿರಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಲಹೆ
ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಥಿರ ವಿದೇಶಾಂಗ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆ ನೀಡುವುದರಿಂದ ದೂರವಿರಬೇಕು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಥಿರ ವಿದೇಶಾಂಗ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆ ನೀಡುವುದರಿಂದ ದೂರವಿರಬೇಕು ಎಂದು ಸಲಹೆ ನೀಡಿದೆ.
ಈ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳು ಹವಾಮಾನಕ್ಕಿಂತ ವೇಗವಾಗಿ ಬದಲಾಗುತ್ತದೆ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪಾಕಿಸ್ತಾನದೆಡೆಗೆ ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಒಂದು ದಿನ ಪಾಕಿಸ್ತಾನದ ವಿರುದ್ಧವಾಗಿದ್ದರೆ ಮತ್ತೊಂದು ದಿನ ಲಾಹೋರ್ ಗೆ ಹೋಗುತ್ತಾರೆ. ಒಂದು ದಿನ ಮಾತನಾಡದೆ ಇದ್ದರೆ, ಮತ್ತೊಂದು ದಿನ ಪಾಕಿಸ್ತಾನದೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತಾರೆ ಎಂದು ಅಭಿಷೇಕ್ ಮನು ಸಿಂಘ್ವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣದ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಬೇಕು, ಸ್ಥಿರತೆ ಇದ್ದಲ್ಲಿ ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಾವಿದ್ದೇವೆ ಎಂದು ಅಭಿಷೇಕ್ ಮನು ಸಿಂಘ್ವಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


