ಗುಂಟೂರಿನಲ್ಲಿ ರಸ್ತೆ ಅಪಘಾತ; 3 ಸಾವು, 15 ಮಂದಿಗೆ ಗಾಯ
ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಟ ಮೂವರು ಮೃತಪಟ್ಟು, 15 ಮಂದಿ ...

Published On :
ಗುಂಟೂರು: ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಟ ಮೂವರು ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಿದುಗುರಲ್ಲಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಖಾಸಗಿ ಬಸ್ಸು ನಿಲ್ಲಿಸಿದ್ದ ಲಾರಿಗೆ ಹೋಗಿ ಗುದ್ದಿ ಈ ಅವಘಡ ಸಂಭವಿಸಿದೆ.
ವಿನಾಯಕ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ಸು ಹೈದರಾಬಾದ್ ನಿಂದ ನೆಲ್ಲೂರು ಕಡೆಗೆ ಹೋಗುತ್ತಿತ್ತು. ಅಷ್ಟು ದೂರದ ಪ್ರಯಾಣವಾದರೂ ಕೂಡ ಇದ್ದದು ಒಬ್ಬರೇ ಚಾಲಕ. ರಾತ್ರಿ ಪ್ರಯಾಣವಾಗಿದ್ದರಿಂದ ಚಾಲಕ ನಸುಕಿನ ಜಾವ ನಿದ್ದೆಗೆ ಜಾರಿ ಚಾಲನೆಯಲ್ಲಿ ನಿಯಂತ್ರಣ ತಪ್ಪಿರಬೇಕು. ಮಧ್ಯರಾತ್ರಿಯಾದ ನಂತರ ಬಸ್ಸು ಓಡಿಸುವಾಗ ನಿದ್ದೆ ಬಾರದಂತೆ ತಡೆಯಲು ಎರಡು ಸಾರಿ ಬಸ್ಸನ್ನು ನಿಲ್ಲಿಸಿ ಟೀ ಕುಡಿದಿದ್ದನಂತೆ. ಆದರೆ ಸ್ವಲ್ಪ ಮುಂದೆ ಹೋದಾಗ ನಿಯಂತ್ರಣ ಕಳೆದುಕೊಂಡು ಲಾರಿಗೆ ಗುದ್ದಿದ್ದಾನೆ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಹೇಳಿದ್ದಾರೆ.
ಅಪಘಾತ ನಡೆದ ಕೂಡಲೇ ಚಾಲಕ ಬಸ್ಸು ಬಿಟ್ಟು ಪರಾರಿಯಾಗಿದ್ದಾನೆ. ಅಲ್ಲಿದ್ದ ದಾರಿಹೋಕರು ಪೊಲೀಸರಿಗೆ ವಿಷಯ ಮುಟ್ಟಿಸಿದರು. ನಂತರ ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಸಾವಿಗೀಡಾದವರ ಗುರುತಿಗಾಗಿ ಪ್ರಯತ್ನಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


