ದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 2 ಯೋಧರು ಸೇರಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದ ಕೇವಲ 24 ಗಂಟೆಗಳ ಅವಧಿಯಲ್ಲಿ ಸೇನಾಪಡೆ ವಾಹನಗಳ ಮೇಲೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಇಬ್ಬರು ಸೇನಾಪಡೆ ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿಯನ್ನು ಕೊಂದು ಹಾಕಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 2 ಯೋಧರು ಸೇರಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮ
ಕಾಶ್ಮೀರದಲ್ಲಿ ಉಗ್ರ ದಾಳಿ (ಸಂಗ್ರಹ ಚಿತ್ರ)
Published On :

ಬಾರಾಮುಲ್ಲಾ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದ ಕೇವಲ 24 ಗಂಟೆಗಳ ಅವಧಿಯಲ್ಲಿ ಸೇನಾಪಡೆ ವಾಹನಗಳ ಮೇಲೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಇಬ್ಬರು ಸೇನಾಪಡೆ  ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿಯನ್ನು ಕೊಂದು ಹಾಕಿದ್ದಾರೆ.

ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಖ್ವಾಜಾಬಾಗ್ ನಲ್ಲಿ ರಾತ್ರಿ ಸುಮಾರು2.30ರ ಸಮಯದಲ್ಲಿ ಸೇನಾಪಡೆಯ ವಾಹನಗಳು ಚಲಿಸುತ್ತಿದ್ದಾ ದಿಢೀರ್ ದಾಳಿ ನಡೆಸಿದ ಉಗ್ರಗಾಮಿಗಳು ಇಬ್ಬರು  ಯೋಧರನ್ನು ಕೊಂದು ಹಾಕಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೂ ಉಗ್ರರು ಗುಂಡು ಹಾರಿಸಿದ್ದು, ಸ್ಥಳದಲ್ಲೇ ಅವರೂ ಕೂಡ ಹುತಾತ್ಮರಾಗಿದ್ದಾರೆ ಎಂದು  ತಿಳಿದುಬಂದಿದೆ. ಘಟನೆಯಲ್ಲಿ ಇತರೆ ಮೂವರ ಸೈನಿಕರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಸ್ತುತ ಉಗ್ರರು ಅಡಗಿದ್ದಾರೆ ಎಂದು ಹೇಳಲಾಗುತ್ತಿರುವ ಖ್ವಾಜಾಭಾಗ್ ಪ್ರದೇಶವನ್ನು ಸೇನಾಪಡೆಗಳು ಸುತ್ತುವರೆದಿದ್ದು, ಅವಿತಿರುವ ಉಗ್ರರಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.