ಕಾಶ್ಮೀರ ವಿಷಯದಲ್ಲಿ ಸೂಕ್ಷ್ಮವಾಗಿರಿ, ಕಾಂಗ್ರೆಸ್ ಗೆ ಬಿಜೆಪಿ ಸಲಹೆ
ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಅವಕಾಶವಾದಿತನ ಪ್ರದರ್ಶಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ:ಕಾಂಗ್ರೆಸ್ ಪಕ್ಷ ಪಾಕಿಸ್ತಾನವನ್ನು ನಿರ್ದೋಷಿಯಂತೆ ಬಿಂಬಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಅವಕಾಶವಾದಿತನ ಪ್ರದರ್ಶಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದ ವಿಷಯದಲ್ಲಿ ತನಗೆ ಸೂಕ್ಷ್ಮತೆ ಇಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿರುವ ವೆಂಕಯ್ಯ ನಾಯ್ಡು, ಈ ಬಗ್ಗೆ ಕಾಂಗ್ರೆಸ್ ಪಕ್ಷದವರ ಹೇಳಿಕೆ ಹಾಗೂ ವಿರೋಧಾಭಾಸಗಳು ರಾಜಕೀಯ ಅವಕಾಶವಾದಿತನವನ್ನು ಸ್ಪಷ್ಟವಾಗಿ ತಿಳಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್ ನ ಅಸ್ಥಿರವಾದ ನಿಲುವು ಸ್ಥಿರವಾಗಿದೆ ಎಂದು ವ್ಯಂಗ್ಯವಾಡಿರುವ ವೆಂಕಯ್ಯ ನಾಯ್ಡು , ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ಹಿತಕ್ಕಿಂತ ರಾಜಕೀಯ ಅವಕಾಶವಾದಿತನ ಹೆಚ್ಚಾಗಿದೆ ಎಂಬಂತೆ ತೋರುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷವೇಕೆ ಪಾಕಿಸ್ತಾನವನ್ನು ನಿರಪರಾಧಿಯೆಂಬಂತೆ ಬಿಂಬಿಸಲು ಹೊರಟಿದೆ? ಕಾಶ್ಮೀರ ವಿಷಯದಲ್ಲಿ ಸೂಕ್ಷ್ಮವಾಗಿರುವಂತೆ ಕಾಂಗ್ರೆಸ್ ಗೆ ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


