ವೆಂಕಯ್ಯ ನಾಯ್ಡು ಟೀಕೆಗೆ ಕಾಂಗ್ರೆಸ್ ತಿರುಗೇಟು
ಕಾಶ್ಮೀರ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ರಾಜಕೀಯ ಅವಕಾಶವಾದಿತನದ ಆರೋಪ ಮಾಡಿದ್ದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿ

ನವದೆಹಲಿ: ಕಾಶ್ಮೀರ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ರಾಜಕೀಯ ಅವಕಾಶವಾದಿತನದ ಆರೋಪ ಮಾಡಿದ್ದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಕ್ ಪ್ರಧಾನಿ ನವಾಜ್ ಷರೀಫ್ ನೊಂದಿಗೆ ಏನು ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದೆ.
ಕಾಶ್ಮೀರ ವಿಷಯದಲ್ಲಿ ಕಾಂಗ್ರೆಸ್ ಪಕ್ಷದವರ ಹೇಳಿಕೆ ಹಾಗೂ ವಿರೋಧಾಭಾಸಗಳು ರಾಜಕೀಯ ಅವಕಾಶವಾದಿತನವನ್ನು ಸ್ಪಷ್ಟವಾಗಿ ತಿಳಿಸುತ್ತಿದೆ ಎಂದಿದ್ದ ವೆಂಕಯ್ಯ ನಾಯ್ಡು ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಡಿಸೆಂಬರ್ 2015 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವೇಳೆ ನವಾಜ್ ಷರೀಫ್ ಅವರೊಂದಿಗೆ ಏನು ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಿದ್ದಕ್ಕೆ ಪ್ರತಿಯಾಗಿ ನಮಗೆ ಸಿಕ್ಕಿದ್ದು ಗುರಿದಾಸ್ ಪುರ, ಉಧಂಪುರ, ಪಠಾಣ್ ಕೋಟ್ ನಲ್ಲಿ ಭಯೋತ್ಪಾದಕ ದಾಳಿ ಹಾಗೂ ಕಾಶ್ಮೀರದಲ್ಲಿ ಗಲಭೆ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸುತ್ತದೆ. ಆದರೆ ನಿಜವಾದ ವಿಷಯ ಇರುವುದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎಂದು ಆನಂದ್ ಶರ್ಮಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


