ದೇಶ

ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರವೆಂದ ದಿಗ್ವಿಜಯ್ ಸಿಂಗ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೂಷಿಸಲು ಹೋಗಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರು ತಾವೇ ವಿವಾದಕ್ಕೆ ಸಿಲುಕಿಕೊಂಡಿರುವ...

ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರವೆಂದ ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್
Published On :

ಭೋಪಾಲ್ (ಮಧ್ಯಪ್ರದೇಶ): ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೂಷಿಸಲು ಹೋಗಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರು ತಾವೇ ವಿವಾದಕ್ಕೆ ಸಿಲುಕಿಕೊಂಡಿರುವ ಘಟನೆ ಗುರುವಾರ ನಡೆದಿದೆ.

ಕಾಶ್ಮೀರ ಹಿಂಸಾಚಾರ ಘಟನೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ದಿಗ್ವಿಜಯ್ ಸಿಂಗ್ ಅವರು, ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರವೆಂದು ಹೇಳಿ, ತಮಗೆ ಅರಿವಿಲ್ಲದೆಯೇ ಮಾತನಾಡಲು ಆರಂಭಿಸಿದ್ದರು. ನಂತರ ತಮ್ಮ ಅಚಾತುರ್ಯವನ್ನು ಅರಿತು ಕೂಡಲೇ ಹೇಳಿಕೆಗೆ ತೇಪೆ ಹಚ್ಚಲು ಪ್ರಯತ್ನಿಸಿದರು.

ಮೋದಿಯವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಬಲೂಚಿಸ್ಥಾನದಲ್ಲಿರುವ ಜನತೆಗೆ ಅವರು ಧನ್ಯವಾದ ಹೇಳುತ್ತಾರೆ. ಆದರೆ, ಕಾಶ್ಮೀರದಲ್ಲಿ ನೆಲೆಸಿರುವ ಭಾರತೀಯರೊಂದಿಗೆ ಮಾತುಕತೆ ನಡೆಸಲು ಅವರು ತಯಾರಿಲ್ಲ. ಕಾಶ್ಮೀರವು ಭಾರತ ಅಕ್ರಮಿತ ಕಾಶ್ಮೀರವಾಗಲಿ ಅಥವಾ ಪಾಕ್ ಆಕ್ರಮಿತ ಕಾಶ್ಮೀರವಾಗಲಿ ನಾವು ಆ ಪ್ರದೇಶದಲ್ಲಿರುವ ಜನರ ಮೇಲೆ ನಂಬಿಕೆ ಇಡಬೇಕು. ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಭಾರತ ಆಕ್ರಮಿತ ಕಾಶ್ಮೀರ ಹೇಳಿಕೆಗೆ ತೇಪೆ ಹಚ್ಚಲು ಯತ್ನಿಸಿದ ಅವರು, ಕಾಶ್ಮೀರ ಭಾರತದ ಭಾಗವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನಿಷ್ಠ ಪಕ್ಷ ಕಾಶ್ಮೀರದ ಬಗ್ಗೆಯಾದರೂ ಕಾಳಜಿ ವಹಿಸಬೇಕು ಎಂದರು.

ತಮ್ಮ ಆಚಾತುರ್ಯ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ ಭಾಗವಾಗಿರುವ ಕಾಶ್ಮೀರದ ಬಗ್ಗೆ ಕಾಳಜಿವಹಿಸುವ ಬದಲು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆಂಬುದು ನನ್ನ ಹೇಳಿಕೆಯ ಅರ್ಥವಾಗಿತ್ತು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.