ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ 786 ಅಪಘಾತ ವಲಯಗಳ ನಿಗದಿ: ಗಡ್ಕರಿ
ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಮಾರು 800 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು,...

Published On :
ವಿಸಾಖಪಟ್ಟಣಂ: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಮಾರು 800 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಶೀಘ್ರವೇ ನಿಗದಿಪಡಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಎರಡು ದಿನಗಳ ರಸ್ತೆ ಸುರಕ್ಷತಾ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಗಡ್ಕರಿ, ಸರ್ಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ 786 ಅಪಘಾತ ವಲಯಗಳನ್ನು ಗುರುತಿಸಿದ್ದು, ಸುಮಾರು 11 ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ ಅವುಗಳನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.
ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ 1.5 ಲಕ್ಷ ಜನ ಸಾವನ್ನಪ್ಪುತ್ತಿದ್ದು, ಇದನ್ನು ಮುಂದಿನ ದಿನಗಳಲ್ಲಿ ರಾಜ್ಯಗಳ ಸಾರಿಗೆ ಸಚಿವರ ಸಹಕಾರೊಂದಿಗೆ ಶೇ.50ರಷ್ಟು ಕಡಿಮೆ ಮಾಡುವ ಉದ್ದೇಶ ಹೊಂದಿರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


