ಆರ್ ಬಿಐ ಗವರ್ನರ್ ನೇಮಕ: ಮೋದಿ, ಜೇಟ್ಲಿಯಿಂದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನೂತನ ಗವರ್ನರ್ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ...

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನೂತನ ಗವರ್ನರ್ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಗವರ್ನರ್ ರಘುರಾಂ ರಾಜನ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 4ರಂದು ಮುಕ್ತಾಯವಾಗಲಿದೆ. ಹೀಗಾಗಿ, ಅದಕ್ಕೂ ಮುನ್ನವೇ ನೂತನ ಗವರ್ನರ್ ನೇಮಕ ಮಾಡುವ ಕುರಿತು ಪ್ರಧಾನಿ ನಿವಾಸದಲ್ಲಿ ಮೋದಿ ಮತ್ತು ಜೇಟ್ಲಿ ಅವರು ಮಹತ್ವದ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜೇಟ್ಲಿ, ಹೆಸರು ಅಂತಿಮ ಆದ ಬಳಿಕ ತಿಳಿಸಲಾಗುವುದು ಎಂದರು.
ಆರ್ ಬಿಐ ನಿಯಮದ ಪ್ರಕಾರ, ಹಣಕಾಸು ಸಚಿವರ ಜೊತೆಗಿನ ಸಮಾಲೋಚನೆ ನಂತರ ಪ್ರಧಾನಿ ಅವರು ಗವರ್ನರ್ ಆಯ್ಕೆ ಮಾಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


