ಡಿಎಂಕೆ ಶಾಸಕರ ಅಮಾನತು ರದ್ದುಗೊಳಿಸಲು ಸ್ಪೀಕರ್ ಮತ್ತೆ ನಕಾರ
ಡಿಎಂಕೆಯ 80 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ತಮಿಳುನಾಡು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್...

Published On :
ಚೆನ್ನೈ: ಡಿಎಂಕೆಯ 80 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ತಮಿಳುನಾಡು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅವರು ಶುಕ್ರವಾರ ಮತ್ತೆ ನಿರಾಕರಿಸಿದ್ದಾರೆ.
ಅಮಾನತು ಆದೇಶವನ್ನು ಮರು ಪರಿಶೀಲಿಸಬೇಕು ಎಂಬ ಮನವಿಯನ್ನು ಸ್ಪೀಕರ್ ಇಂದು ಸಹ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಒಂದು ಕಡೆ ಅಮಾನತುಗೊಂಡಿರುವ ಡಿಎಂಕೆ 80 ಶಾಸಕರು ನಿನ್ನೆಯಿಂದ ವಿಧಾನ ಸಭೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಅಮಾನತುಗೊಳ್ಳದ 9 ಶಾಸಕರ ಪೈಕಿ ಏಳು ಶಾಸಕರು ಎರಡು ಬಾರಿ ಸದನದಿಂದ ಹೊರನಡೆದಿದ್ದರು.
ಇಂದು ಡಿಎಂಕೆಯ ಕೆ.ಎನ್. ನೆಹರೂ ಅವರು ತಮ್ಮ ಪಕ್ಷದ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದರು. ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸ್ಪೀಕರ್, ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಮಾನತುಗೊಳ್ಳದ ಏಳು ಡಿಎಂಕೆ ಸದಸ್ಯರು, ಕಾಂಗ್ರೆಸ್ ಹಾಗೂ ಐಯುಎಂಎಲ್ ಸದಸ್ಯರು ಒಟ್ಟಾಗಿ ಸೇರಿ 80 ಡಿಎಂಕೆ ಸದಸ್ಯರ ಅಮಾನತು ಆದೇಶವನ್ನು ಮರುಪರಿಶೀಲಿಸಬೇಕು ಎಂದು ನಿನ್ನೆ ಸ್ಪೀಕರ್‌ಗೆ ಮನವಿ ಮಾಡಿದ್ದರು. ಆದರೆ ಸ್ಪೀಕರ್ ಧನಪಾಲ್ ಅವರನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು.
‘ಡಿಎಂಕೆ ಸದಸ್ಯರು ಉದ್ದೇಶವಿಲ್ಲದೇ ಮಾತನಾಡಿದ್ದಾರೆ. ಸದನದಲ್ಲಿ ಅವರ ವರ್ತನೆಯ ವಿಡಿಯೊ ದೃಶ್ಯಾವಳಿಯ ದಾಖಲೆಗಳಿವೆ. ಬೇರೆ ಯಾವುದೇ ಮಾರ್ಗವಿಲ್ಲದೇ ಅವರನ್ನು ಅಮಾನತು ಮಾಡಲಾಯಿತು. ಮರುಪರಿಶೀಲಿಸುವ ಪ್ರಶ್ನೆಯೇ ಇಲ್ಲ. ನಿಯಮಾವಳಿ ಪ್ರಕಾರವೇ ಸದನ ಕಾರ್ಯನಿರ್ವಹಿಸುತ್ತದೆ’ ಎಂದು ಸ್ಪೀಕರ್ ಹೇಳಿದ್ದಾರೆ.
ಈ ಮಧ್ಯೆ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಸದಸ್ಯರು ಇಂದು ತಮಿಳುನಾಡು ವಿಧಾನಸಭೆಯ ಹೊರಗೆ 'ಮಾದರಿ ವಿಧಾಸಭೆ' ನಿರ್ಮಿಸಿ, ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


