ದೇಶ

ಮತ್ತೆ ಕ್ಯಾತೆ ತೆಗೆದ ಜಯಲಲಿತಾ: ಕಾವೇರಿ ನೀರಿಗಾಗಿ ಸುಪ್ರೀಂ ಮೊರೆ

ಕರ್ನಾಟಕ ಬಿಡಬೇಕಿರುವ ಕಾವೇರಿ ನದಿ ನೀರಿನ ಪಾಲನ್ನು ಪಡೆದುಕೊಳ್ಳಲು ಇನ್ನು ಒಂದೆರಡು ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಲಾಗುವುದು ಎಂದು ..

ಮತ್ತೆ ಕ್ಯಾತೆ ತೆಗೆದ ಜಯಲಲಿತಾ: ಕಾವೇರಿ ನೀರಿಗಾಗಿ ಸುಪ್ರೀಂ ಮೊರೆ
ಜಯಲಲಿತಾ
Published On :

ಚೆನ್ನೈ: ಕರ್ನಾಟಕ ಬಿಡಬೇಕಿರುವ ಕಾವೇರಿ ನದಿ ನೀರಿನ ಪಾಲನ್ನು ಪಡೆದುಕೊಳ್ಳಲು ಇನ್ನು ಒಂದೆರಡು ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶದ ಪ್ರಕಾರ ತಮಿಳುನಾಡಿಗೆ ಬಿಡಬೇಕಾಗಿದ್ದ ನೀರನ್ನು ಇದವರೆಗೂ ಕರ್ನಾಟಕ ಬಿಟ್ಟಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ  ಕರ್ನಾಟಕದಿಂದ ನಮ್ಮ ಪಾಲಿನ ನೀರನ್ನು ಪಡೆದುಕೊಳ್ಳುವ ವಿಶ್ವಾಸ ಇದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ.

ನ್ಯಾಯಮಂಡಳಿ ಆದೇಶ ಪ್ರಕಾರ ಜೂನ್‌ ಮತ್ತು ಜುಲೈ ತಿಂಗಳಲ್ಲಿ ಬಿಡಬೇಕಿದ್ದ ನೀರನ್ನು ಕರ್ನಾಟಕ ಬಿಟ್ಟಿಲ್ಲ. ಕಾವೇರಿ ನೀರು ಬಿಡುವಂತೆ ಕರ್ನಾಟಕ ಮತ್ತು ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೇಕೆದಾಟಿನಲ್ಲಿ ಅಣೆಕಟ್ಟೆ ನಿರ್ಮಿಸುವ ಕರ್ನಾಟಕದ ನಿರ್ಧಾರದ ಬಗ್ಗೆ ತಮಿಳುನಾಡು ರೈತರು ಚಿಂತಿತರಾಗಿದ್ದಾರೆ. ಒಂದು ವೇಳೆ ಕರ್ನಾಟಕ ಸರ್ಕಾರ ಅಣೆಕಟ್ಟೆ ನಿರ್ಮಾಣಕ್ಕೆ ಮುಂದಾದರೆ ತಮಿಳುನಾಡು ರೈತರ ಹಿತರಕ್ಷಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಸಿದ್ಧ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.