ದೇಶ

ದೆಹಲಿಯಲ್ಲಿ ಎನ್'ಕೌಂಟರ್: 1 ಪೇದೆ ಸೇರಿ 2 ಕ್ರಿಮಿನಲ್'ಗಳು ಗಾಯ, 5 ಬಂಧನ

ರಾಜಧಾನಿ ದೆಹಲಿಯಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಘಟನೆ ವೇಳೆ ಓರ್ವ ಪೇದೆ ಸೇರಿದಂತೆ ಇಬ್ಬರು ಆರೋಪಿಗಳು ಗಾಯಗೊಂಡಿರುವ ಘಟನೆ...

ದೆಹಲಿಯಲ್ಲಿ ಎನ್'ಕೌಂಟರ್: 1 ಪೇದೆ ಸೇರಿ 2 ಕ್ರಿಮಿನಲ್'ಗಳು ಗಾಯ, 5 ಬಂಧನ
ಸಂಗ್ರಹ ಚಿತ್ರ
Published On :

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಘಟನೆ ವೇಳೆ ಓರ್ವ ಪೇದೆ ಸೇರಿದಂತೆ ಇಬ್ಬರು ಕ್ರಿಮಿನಲ್'ಗಳು ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ದೆಹಲಿ ರೊಹಿನಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ 10.30ರ ಸುಮಾರಿಗೆ ಎನ್ ಕೌಂಟರ್ ನಡೆದಿದ್ದು, ಆರೋಪಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

ಕ್ರಿಮಿನಲ್ ಗಳ ಗುಂಪು ಹಾಗೂ ಪೊಲೀಸರ ತಂಡದ ನಡುವೆ ರೊಹಿನಿ ಸೆಕ್ಟರ್ 24 ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಘಟನೆ ವೇಳೆ ಪೇದೆ ಪ್ರದೀಪ್ ಅವರು ಗಾಯಗೊಂಡಿದ್ದಾರೆ. ಅಲ್ಲದೆ, ಸುಧೀರ್ ಮತ್ತು ವಿಜಯ್ ಎಂಬ ಇಬ್ಬರು ಆರೋಪಿಗಳಿಗೂ ಗಾಯವಾಗಿದೆ ಎಂದು ಉಪ ಪೊಲೀಸ್ ಆಯುಕ್ತ ವಿಕ್ರಮ್ ಜಿತ್ ಸಿಂಗ್ ಅವರು ಹೇಳಿದ್ದಾರೆ.

ಘಟನೆ ವೇಳೆ ಪೊಲೀಸರು 5 ಆರೋಪಿಗಳನ್ನು ಬಂಧಿಸಿದ್ದು, ಸಂಜಯ್ ಫರ್ಮಾನ್, ಸನ್ನಿ, ಸುಧೀರ್, ವಿಜಯ್ ಎಂಬುವವರನ್ನು ಬಂಧಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.