ಕುಪ್ವಾರದಲ್ಲಿ ಮತ್ತೆ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ತಂಗ್ಧಾರ್ ನಲ್ಲಿ 4 ಉಗ್ರರು ಅಡಗಿ ಕುಳಿತು ದಾಳಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ತಂಗ್ಧಾರ್ ನಲ್ಲಿ 4 ಉಗ್ರರು ಅಡಗಿ ಕುಳಿತು ದಾಳಿ ನಡೆಸುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ.
ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆ 4 ಪ್ಯಾರಾ ಕಮಾಂಡೋಗಳು ಕಾರ್ಯಾಚರಣೆ ನಡೆಸುತ್ತಿವೆ. ಉಗ್ರರು ಅಡಗಿ ಕುಳಿತಿರುವ ಪ್ರದೇಶದ ಸುತ್ತಲೂ ಈಗಾಗಲೇ ಯೋಧರು ಸುತ್ತವರೆದಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.
ದಾಳಿಯಲ್ಲಿ ಗಾಯಗೊಂಡಿರುವ ಹಾಗೂ ಸಾವಿನ ಕುರಿತಂತೆ ಯಾವುದೇ ವರದಿಗಳಾಗಿಲ್ಲ. ಭಾರತೀಯ ಸೇನೆ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪವಿರುವ ನೌಗಮ್ ವಲಯದಲ್ಲಿ ಉಗ್ರರು ಭಾರತದ ಒಳನುಸುಳಲು ಯತ್ನಿಸಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ್ದ ಯೋಧರು ನಾಲ್ಕು ಮಂದಿ ಉಗ್ರನ್ನು ಹತ್ಯೆ ಮಾಡಿ ಓರ್ವ ಉಗ್ರನನ್ನು ಸೆರೆ ಹಿಡಿದಿದ್ದರು. ಇದೀಗ ಮತ್ತೆ ಮೂರು-ನಾಲ್ಕು ಉಗ್ರರು ಒಳನುಸುಳಲು ಯತ್ನಿಸಿದ್ದು, ಅಡಗಿ ಕುಳಿತಿರುವ ಉಗ್ರರಿಗಾಗಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


