ದೇಶ

ಭಾರತೀಯ ವ್ಯಕ್ತಿ ನೇಪಾಳದಲ್ಲಿ ಆತ್ಮಹತ್ಯೆ

ಭಾರತೀಯ ಮೂಲದ ವ್ಯಕ್ತಿಯೊಬ್ಬ ನೇಪಾಳದ ಮಹೊತ್ತಾರಿ ಜಿಲ್ಲೆಯ ದಮ್ಹಿಮದಾಯ್ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಸೋಮವಾರ...

ಭಾರತೀಯ ವ್ಯಕ್ತಿ ನೇಪಾಳದಲ್ಲಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಕಠ್ಮಂಡು: ಭಾರತೀಯ ಮೂಲದ ವ್ಯಕ್ತಿಯೊಬ್ಬ ನೇಪಾಳದ ಮಹೊತ್ತಾರಿ ಜಿಲ್ಲೆಯ ದಮ್ಹಿಮದಾಯ್ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಸೋಮವಾರ ನಡೆದಿದೆ.

ರಾಮ್ ಸ್ನೇಹಿ ಸದಾ (55) ಆತ್ಮಹತ್ಯೆಗೆ ಶರಣಾಗಿರುವ ಭಾರತೀಯನಾಗಿದ್ದಾನೆ. ಬಿಹಾರದ ಸೀತಾಮರ್ಹಿ ಜಿಲ್ಲೆಯ ಸಿರ್ಸಿಯಾ ಮೂಲದವರಾಗಿರುವ ರಾಮ್ ಸ್ನೇಹಿ ಅವರು, ಕೆಲಸ ದಿನಗಳ ಹಿಂದಷ್ಟೇ ನೇಪಾಳದಲ್ಲಿ ನೆಲೆಯೂರಿರುವ ತಮ್ಮ ಸಂಬಂಧಿಕ ಬಿಜೋ ಸದಾ ಅವರ ಮನೆಗೆ ಹೋಗಿದ್ದರು.

ನಂತರ ಭಾರತಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ,  ದಮ್ಹಿಮದಾಯ್ ನ ರಾಣಿ ರತಾವರದ ರಸ್ತೆಯ ಬಳಿ ಇದ್ದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ರಾಮ್ ಸ್ನೇಹಿ ಸದಾ ಅವರ ಮೃತದೇಹವನ್ನು ಜಲೇಶ್ವರದಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.