ದೇಶ

ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ತಪ್ಪು: ಶಶಿ ತರೂರ್

ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ಪ್ರಮಾದ ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.

ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ತಪ್ಪು: ಶಶಿ ತರೂರ್
ಶಶಿ ತರೂರ್ ಹಾಗೂ ಎಬಿವಿಪಿ ಪ್ರತಿಭಟನೆ (ಸಂಗ್ರಹ ಚಿತ್ರ)
Published On :

ನವದೆಹಲಿ: ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ  ದೇಶದ್ರೋಹ ಪ್ರಕರಣ ದಾಖಲಿಸಿದ್ದೇ  ದೊಡ್ಡ ಪ್ರಮಾದ ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ದೇಶದ್ರೋಹಿ ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ  ಸಲಹೆ ನೀಡಿರಲಿಲ್ಲ. ಯಾರಾದರೂ ಉದ್ದೇಶ ಪೂರ್ವಕವಾಗಿ ಘೋಷಣೆಗಳನ್ನು ಕೂಗಿದರೆ ಅಥವಾ ಕೂಗುವಂತೆ ಪ್ರೇರೇಪಿಸಿದರೆ ಖಂಡಿತಾ ಅವರ ವಿರುದ್ಧ ದೇಶದ್ರೋಹ ಪ್ರಕರಣ  ದಾಖಲಿಸಬಹುದು. ಆದರೆ ಬೆಂಗಳೂರು ಪ್ರಕರಣದಲ್ಲಿ ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದು ದೊಡ್ಡ ಪ್ರಮಾದ ಎಂದು ಹೇಳಿದ್ದಾರೆ.

ನನ್ನ ಪ್ರಕಾರ, ಕೆಲವರ ಘೋಷಣೆಗಳಿಂದ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದು ತಪ್ಪು. ಇದು ತಪ್ಪು  ಎಂದು ತಿಳಿದಿರುವ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಕೂಡ ಅಮ್ನೆಸ್ಟಿ ವಿರುದ್ಧದ ಪ್ರಕರಣ ಕೈಬಿಡಲು ನಿರ್ಧರಿಸಿದ್ದಾರೆ. ಸುಳ್ಳು ಆರೋಪಗಳನ್ನು ಹಿಡಿದು ಅದರ ಸುತ್ತಲೇ  ಸುತ್ತುವುದಕ್ಕಿಂತ ಇದನ್ನು ಇಲ್ಲಿಯೇ ಬಿಟ್ಟು ನಾವು ಮುಂದೆ ಹೋಗಬೇಕು ಎಂದು ತರೂರ್ ಹೇಳಿದ್ದಾರೆ.

ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಅದರ ವಿರುದ್ಧದ  ಪ್ರಕರಣವನ್ನು ಕೈಬಿಡುವ ಮುನ್ಸೂಚನೆ ನೀಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಇದಕ್ಕೆ ಪ್ರತಿಕ್ರಿಯಿಸಿ ಕೆಲ ರಾಜಕೀಯ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗಾಗಿ  ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿವೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.