ದೇಶ

ಮುಸ್ಲಿಮರು ಜನಸಂಖ್ಯೆ ಹೆಚ್ಚಿಸಿಕೊಳ್ಳಬಹುದಾದರೇ ಹಿಂದೂಗಳಿಗೆ ಏಕೆ ಸಾಧ್ಯವಿಲ್ಲ: ಮೋಹನ್ ಭಾಗವತ್

ಮುಸ್ಲಿಂ ಸಮುದಾಯ ಜನಸಂಖ್ಯೆಯನ್ನ ಹೆಚ್ಚಿಸಿಕೊಳ್ಳಬಹುದಾದರೇ, ಹಿಂದೂಗಳು ತಮ್ಮ ಜನ ಸಂಖ್ಯೆಯನ್ನು ಏಕೆ ಹೆಚ್ಚಿಸಿಕೊಳ್ಳಬಾರದು ಎಂದು ಪ್ರಶ್ನಿಸಿರುವ ಆರ್ ಎಸ್ ಎಸ್ ..

ಮುಸ್ಲಿಮರು ಜನಸಂಖ್ಯೆ ಹೆಚ್ಚಿಸಿಕೊಳ್ಳಬಹುದಾದರೇ ಹಿಂದೂಗಳಿಗೆ ಏಕೆ ಸಾಧ್ಯವಿಲ್ಲ: ಮೋಹನ್ ಭಾಗವತ್
ಮೋಹನ್ ಭಾಗವತ್
Published On :

ಆಗ್ರಾ: ಮುಸ್ಲಿಂ ಸಮುದಾಯ ಜನಸಂಖ್ಯೆಯನ್ನ ಹೆಚ್ಚಿಸಿಕೊಳ್ಳಬಹುದಾದರೇ, ಹಿಂದೂಗಳು ತಮ್ಮ ಜನ ಸಂಖ್ಯೆಯನ್ನು ಏಕೆ ಹೆಚ್ಚಿಸಿಕೊಳ್ಳಬಾರದು ಎಂದು ಪ್ರಶ್ನಿಸಿರುವ ಆರ್ ಎಸ್ ಎಸ್  ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂ ಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಕರೆ ನೀಡಿದ್ದಾರೆ.

ದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಹೀಗಾಗಿ ಹಿಂದುಗಳು ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬಾರದು ಎಂಬುದಕ್ಕೆ ಯಾವುದೇ ಕಾನೂನಿನ ಅಡ್ಡಿ ಆತಂಕವಿಲ್ಲ ಎಂದು ಅವರು ಹೇಳಿದ್ದಾರೆ. ಇದು ಸರ್ಕಾರದ ಆಡಳಿತಕ್ಕೆ ಸಂಬಂಧಪಟ್ಟ ವಿಚಾರವಲ್ಲ. ಬದಲಿಗೆ ಇದು ಸಮಾಜದ ರಚನೆಗೆ ಸಂಬಂಧಿಸಿದ್ದು.  ನಿಮ್ಮ ಬಗ್ಗೆ, ನಿಮ್ಮ ಕುಟುಂಬದ ಬಗ್ಗೆ, ಮತ್ತು ದೇಶದ ಹಿತಾಸಕ್ತಿ ಬಗ್ಗೆ ಯೋಚಿಸಿ ಹಿಂದೂಗಳು ಹೆಚ್ಚೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.