ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರು ಸತ್ಯಾಗ್ರಹಿಗಳಲ್ಲ, ತೀವ್ರವಾದಿಗಳು: ಅರುಣ್ ಜೇಟ್ಲಿ
ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರು ಸತ್ಯಾಗ್ರಹಿಗಳಲ್ಲ ತೀವ್ರಗಾಮಿಗಳು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರು ಸತ್ಯಾಗ್ರಹಿಗಳಲ್ಲ ತೀವ್ರಗಾಮಿಗಳು ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸೇನಾ ಪಡೆ ಮೇಲೆ ಕಾಲು ತೂರಾಟ ನಡೆಸುವವರು ಭಾರತದ ಅಸ್ಮಿತೆ ಮೇಲೆ ಹೊಸ ಮಾದರಿಯಲ್ಲಿ ದಾಳಿ ನಡೆಸುತ್ತಿದ್ದಾರೆ. ಕಲ್ಲು ತೂರಾಟ ಮಾಡುತ್ತಿರುವವರು ಸತ್ಯಾಗ್ರಹಿಗಳೇನಲ್ಲ, ಅವರು ತೀವ್ರವಾದಿಗಳು, ಆದ್ದರಿಂದ ರಾಜ್ಯದ ಜನತೆ ಪ್ರತ್ಯೇಕತಾವಾದಿಗಳ ವಿರುದ್ಧದ ಹೋರಾಟದಲ್ಲಿ ದೇಶದೊಂದಿಗೆ ನಿಲ್ಲಬೇಕು ಎಂದು ಕರೆ ನೀಡಿದ್ದಾರೆ. ಪೊಲೀಸ್ ಪಡೆ ಮೇಲೆ ಕಲ್ಲು ತೂರಾಟ ನಡೆಸುವುದು ದಾಳಿ ಎಂಬುದನ್ನು ಕೆಲವರು ಅರ್ಥ ಮಾಡಿಕೊಳ್ಳುವುದಿಲ್ಲ, ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


