ದೇಶ

ಕಾಶ್ಮೀರ ವಿವಾದಕ್ಕೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಪರಿಹಾರ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದ ನಿಯೋಗದ ಜೊತೆ ಮಾತುಕತೆ ನಡೆಸಿ...

ಕಾಶ್ಮೀರ ವಿವಾದಕ್ಕೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಪರಿಹಾರ: ಪ್ರಧಾನಿ ಮೋದಿ
ಜಮ್ಮು-ಕಾಶ್ಮೀರದ ವಿರೋಧ ಪಕ್ಷಗಳ ನಿಯೋಗದೊಂದಿಗೆ ಸಭೆ ನಡೆಸಿ ಕಾಶ್ಮೀರಿ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಿದ ಪ್ರಧಾನ ಮಂತ್ರಿ
Published On :
ನವದೆಹಲಿ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದ ನಿಯೋಗದ ಜೊತೆ ಮಾತುಕತೆ ನಡೆಸಿ ಪ್ರತಿಕ್ರಿಯೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಶ್ಮೀರದ ಸದ್ಯದ ಪರಿಸ್ಥಿತಿ ಕುರಿತು ತೀವ್ರ ನೋವು ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿನ ಪರಿಸ್ಥಿತಿ ಕುರಿತು ವಿವರಿಸಲು ನಿಯೋಗ ಪ್ರಧಾನಿಯವರನ್ನು ಭೇಟಿ ಮಾಡಿತು.
ಕಾಶ್ಮೀರದ ವಿರೋಧ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಭಟನೆ, ಹಿಂಸಾಚಾರದ ವೇಳೆ ಪ್ರಾಣ ಕಳೆದುಕೊಂಡವರು ನಮ್ಮ ದೇಶದ ಭಾಗವಾಗಿದ್ದಾರೆ. ಅಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತರಲು ಜನತೆಯಲ್ಲಿ ಮನವಿ ಮಾಡಿಕೊಂಡ ಅವರು, ಮಾತುಕತೆಯ ಅಗತ್ಯವಿದೆ. ಸಂವಿಧಾನದ ಚೌಕಟ್ಟಿನಡಿಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ ಎಂದರು.
'' ಇದುವರೆಗೆ ಪ್ರಾಣ ಕಳೆದುಕೊಂಡವರು ಯುವಕರು, ಭದ್ರತಾ ಪಡೆ ಯೋಧರು, ಪೊಲೀಸರು ಯಾರೇ ಆಗಿರಲಿ, ಅದು ನಮಗೆ ದುಃಖ ತರುತ್ತದೆ.'' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.